ರಾಜ್ಯಾದ್ಯಂತ ಏಕರೂಪದ ಶೈಕ್ಷಣಿಕ ವೇಳಾಪಟ್ಟಿ ಜಾರಿ| ಶನಿವಾರ ಮುಂಜಾನೆ 8.30ಕ್ಕೆ ತರಗತಿ ಆರಂಭ

ಸಮಗ್ರ ನ್ಯೂಸ್: ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಶಿಕ್ಷಣ ಇಲಾಖೆಯು ಮಹತ್ವದ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ಶನಿವಾರದ ತರಗತಿಗಳ ವೇಳಾಪಟ್ಟಿಯಲ್ಲಿ ದೊಡ್ಡ ಬದಲಾವಣೆ ತರಲಾಗಿದ್ದು, ಇಡೀ ಕರ್ನಾಟಕದಾದ್ಯಂತ ಎಲ್ಲಾ ಶಾಲೆಗಳಿಗೂ ಅನ್ವಯವಾಗುವಂತೆ ಏಕರೂಪದ ಹೊಸ ಸಮಯವನ್ನು ಅಧಿಕೃತವಾಗಿ ಜಾರಿಗೆ ತರಲಾಗಿದೆ.

Ad Widget ... .. Ad Widget .

ಶಾಲಾ ಶಿಕ್ಷಣ ಇಲಾಖೆಯ ಹೊಸ ಆದೇಶದ ಪ್ರಕಾರ, ಇನ್ಮುಂದೆ ಶನಿವಾರದ ದಿನದಂದು ಬೆಳಗ್ಗೆ 8.30 ರಿಂದ ಮಧ್ಯಾಹ್ನ 12:30 ರವರೆಗೆ ತರಗತಿಗಳು ನಡೆಯಲಿವೆ.

Ad Widget

ಈ ಹಿಂದೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಶನಿವಾರದ ಶಾಲಾ ಅವಧಿಯಲ್ಲಿ ಸಾಕಷ್ಟು ವ್ಯತ್ಯಾಸಗಳಿದ್ದವು. ಕೆಲವು ಭಾಗಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 12 ರವರೆಗೆ ಶಾಲೆಗಳಿದ್ದರೆ, ಇನ್ನು ಕೆಲವು ಕಡೆ ಬೆಳಗ್ಗೆ 7:30 ಕ್ಕೇ ತರಗತಿಗಳು ಆರಂಭವಾಗಿ 11:30 ಕ್ಕೆ ಮುಕ್ತಾಯಗೊಳ್ಳುತ್ತಿದ್ದವು. ಈ ಹಿಂದಿನ ಸಮಯದ ಭಿನ್ನತೆಯಿಂದ ಉಂಟಾಗುತ್ತಿದ್ದ ಗೊಂದಲಗಳಿಗೆ ಈಗ ಸಂಪೂರ್ಣವಾಗಿ ತೆರೆ ಎಳೆಯಲಾಗಿದೆ.

ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು ಕಡ್ಡಾಯವಾಗಿ ಇದೇ ಹೊಸ ವೇಳಾಪಟ್ಟಿಯನ್ನು ಅನುಸರಿಸಬೇಕು ಎಂದು ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

Leave a Comment

Your email address will not be published. Required fields are marked *