ಸಮಗ್ರ ನ್ಯೂಸ್: ಗೃಹಜ್ಯೋತಿ ಯೋಜನೆ ಫಲಾನುಭವಿಗಳ ಮನೆ ಮನೆ ಪರಿಶೀಲನೆ ಕಾರ್ಯ ಜುಲೈ 1ರಿಂದ ರಾಜ್ಯಾದ್ಯಂತ ಆರಂಭವಾಗಲಿದೆ. ರಾಜ್ಯದ ಮತದಾರರು ಮತ್ತು ಅರ್ಹರಿಗೆ ಮಾತ್ರ ಗೃಹಜ್ಯೋತಿ ಯೋಜನೆ ನೀಡಲು ಪರಿಶೀಲನೆ ನಡೆಸಲಾಗುವುದು. ಮೀಟರ್ ರೀಡರ್ ಗಳು, ಎಸ್ಕಾಂ ಸಿಬ್ಬಂದಿ ಗ್ರಾಹಕರ ಮನೆಗಳಿಗೆ ಭೇಟಿ ನೀಡಿ ಫಲಾನುಭವಿಗಳ ದಾಖಲೆ ಪರಿಶೀಲನೆ ನಡೆಸಲಿದ್ದಾರೆ.
2023ರ ಜುಲೈನಲ್ಲಿ ಗೃಹಜ್ಯೋತಿ ಯೋಜನೆ ಜಾರಿಯಾಗಿತ್ತು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಗ್ಯಾರಂಟಿ ಯೋಜನೆಗಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯನ್ನು ಪುನರ್ ಪರಿಶೀಲಿಸಲಿದ್ದು, ಫಲಾನುಭವಿಗಳ ದಾಖಲೆ ಪರಿಶೀಲಿಸಿ ಮಾಹಿತಿ ಪಡೆಯಲಾಗುವುದು.
ಮೊಬೈಲ್ ಆಯಪ್ ಮತ್ತು ಘೋಷಣಾ ಪತ್ರದ ಮೂಲಕ ಅರ್ಜಿ ಭರ್ತಿ ಪ್ರಕ್ರಿಯೆಯನ್ನು ಸಿಬ್ಬಂದಿ ಪೂರ್ಣಗೊಳಿಸಲಿದ್ದಾರೆ. ರಾಜ್ಯದ ಐದು ಎಸ್ಕಾಂಗಳಾದ ಬೆಸ್ಕಾಂ, ಮೆಸ್ಕಾಂ, ಜೆಸ್ಕಾಂ, ಸೆಸ್ಕ್ ವ್ಯಾಪ್ತಿಯಲ್ಲಿ ಪರಿಶೀಲನಾ ಕಾರ್ಯ ನಡೆಯಲಿದೆ. ಆಧಾರ್ ಕಾರ್ಡ್, ಫಲಾನುಭವಿಯ ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ಮತದಾರರ ಗುರುತಿನ ಚೀಟಿ, ಪಾನ್ ಕಾರ್ಡ್, ಬಾಡಿಗೆ ಒಪ್ಪಂದದ ಪತ್ರಗಳು(ಅನ್ವಯಿಸಿದಲ್ಲಿ), ರೇಷನ್ ಕಾರ್ಡ್ ಮತ್ತು ಜಾತಿ ಪ್ರಮಾಣ ಪತ್ರ ಕೋರಲಾಗಿದೆ,








