ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ| ಕರಾವಳಿಯ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಮುಂದಿನ 24 ಗಂಟೆಗಳ ಕಾಲ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯು ಈ ಮೂರೂ ಜಿಲ್ಲೆಗಳಿಗೆ ‘ರೆಡ್ ಅಲರ್ಟ್ ಘೋಷಿಸಿದೆ.

Ad Widget ... .. Ad Widget .

ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ಈಗಾಗಲೇ ರಜೆ ಘೋಷಿಸಿದೆ. ಇನ್ನು ಮಲೆನಾಡು ಭಾಗದ ಶಿವಮೊಗ್ಗ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಘಟ್ಟ ಪ್ರದೇಶಗಳಲ್ಲಿ ‘ಆರೆಂಜ್ ಅಲರ್ಟ್’ ನೀಡಲಾಗಿದೆ.

Ad Widget

ಮತ್ತೊಂದೆಡೆ, ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು ಮತ್ತು ಮಂಡ್ಯ ಸೇರಿದಂತೆ ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ದಿನವಿಡೀ ತಂಪಾದ ಗಾಳಿ ಬೀಸಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Leave a Comment

Your email address will not be published. Required fields are marked *