ಭಾರೀ ಮಳೆ ಹಿನ್ನಲೆ| ರಾಜ್ಯದ ಈ ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ವಿವಿಧ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Ad Widget ... .. Ad Widget .

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಐದು ತಾಲ್ಲೂಕುಗಳ ಶಾಲಾ-ಕಾಲೇಜು ಹಾಗೂ ಅಂಗನವಾಡಿಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Ad Widget

ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಜೋಯಿಡಾ, ದಾಂಡೇಲಿ ಹಾಗೂ ಯಲ್ಲಾಪುರ ತಾಲ್ಲೂಕುಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಈ ಐದೂ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ ಇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮಲೆನಾಡು ಭಾಗದಲ್ಲಿ ಮಳೆ ಮತ್ತು ಬಿರುಗಾಳಿಯ ಅಬ್ಬರ ಜೋರಾಗಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯ ಕಳಸ (Kalasa) ತಾಲೂಕಿನ ಎಲ್ಲಾ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೆ ಇಂದು ರಜೆ ಘೋಷಿಸಿ ಆದೇಶ ಹೊರಡಿಸಲಾಗಿದೆ.

ಮಲೆನಾಡು ಭಾಗದಲ್ಲಿ ವರುಣನ ಅಬ್ಬರ ಜೋರಾಗಿದ್ದು, ಸಾಗರ ತಾಲ್ಲೂಕಿನಾದ್ಯಂತ ಧಾರಾಕಾರ ಮಳೆ ಹಾಗೂ ಭಾರಿ ಗಾಳಿ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಾಲ್ಲೂಕಿನ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳಿಗೆ ಇಂದು ರಜೆ ಘೋಷಿಸಿ ತಹಶೀಲ್ದಾರ್ ಡಾ. ಪ್ರತಿಭಾ ಅವರು ಆದೇಶಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಶಾಲಾ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಚಿಕ್ಕ ಮಕ್ಕಳ ಹಿತದೃಷ್ಟಿಯಿಂದ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಅಂಗನವಾಡಿಗಳಿಗೆ ಮಾತ್ರ ಈ ರಜೆ ಅನ್ವಯವಾಗಲಿದೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಕಾಲೇಜಿಗೆ ರಜೆ ಘೋಷಿಸಿ ತಹಶೀಲ್ದಾರ್ ಸುಪ್ರಿತಾ ಅವರು ಆದೇಶ ಹೊರಡಿಸಿದ್ದಾರೆ.

Leave a Comment

Your email address will not be published. Required fields are marked *