ಯಲ್ಲಾಪುರ ಬಳಿ ಭೀಕರ ಅಪಘಾತ| ಆರು ಮಂದಿ ದಾರುಣ ಸಾವು

ಸಮಗ್ರ ನ್ಯೂಸ್: ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಆರು ಜನ ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್ ಸಮೀಪ ಬಳಗಾರ್ ಬಳಿ ಅಪಘಾತ ಸಂಭವಿಸಿದೆ.

Ad Widget ... .. Ad Widget .

ಪ್ರವಾಸಕ್ಕೆ ಹೊರಟಿದ್ದ ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಡಿಕ್ಕಿಯಾಗಿದೆ. ಕ್ರೂಸರ್ ವಾಹನದಲ್ಲಿದ್ದ ಆರು ಜನ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರು ಧಾರವಾಡ ಮೂಲದವರು ಎನ್ನಲಾಗಿದೆ.

Ad Widget

ಕ್ರೂಸರ್ ವಾಹನದ ಚಾಲಕ ಸಂಜೀವ್(33), ಬಸವರಾಜ್(48), ಅಭಿಷೇಕ್ ಈಶ್ವರ್(28), ಅಕ್ಷಯ್(26), ಅಭಿಷೇಕ್(26), ಮಂಜುನಾಥ್ ಅಶೋಕ್ ಚುಲಕಿ(32) ಮೃತಪಟ್ಟವರು ಎಂದು ಹೇಳಲಾಗಿದೆ. ಕ್ರೂಸರ್ ನಲ್ಲಿದ್ದ ಮೂವರು ಗಾಯಗೊಂಡಿದ್ದಾರೆ. ಶಿವರಾಜ ದುರ್ಗಪ್ಪ ಮಡಿವಾಳ(22), ಚೆನ್ನಬಸಯ್ಯ ಬಸಲಿಂಗಯ್ಯ ಸಂಪಗಾವ(28) ಮತ್ತು ಸಚಿನ್ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗುತ್ತಿದ್ದು, ಗಾಯಗೊಂಡವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸುವ ಕಾರ್ಯ ಪ್ರಗತಿಯಲ್ಲಿದೆ. ಅಪಘಾತಕ್ಕೆ ನಿಖರ ಕಾರಣ ಏನೆಂಬುದು ಇನ್ನಷ್ಟೇ ತಿಳಿದುಬರಬೇಕಿದೆ.

Leave a Comment

Your email address will not be published. Required fields are marked *