ಭಾರತೀಯ ರೈಲ್ವೆಯಲ್ಲಿ 6565 ಹುದ್ದೆಗಳಿಗೆ ನೇಮಕಾತಿ| ಇಲ್ಲಿದೆ ಡೀಟೈಲ್ಸ್

ಸಮಗ್ರ ನ್ಯೂಸ್: ರೈಲ್ವೆ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಮತ್ತೊಂದು ಮಹತ್ವದ ಅವಕಾಶ ಲಭ್ಯವಾಗಿದೆ. ರೈಲ್ವೆ ನೇಮಕಾತಿ ಮಂಡಳಿ (RRB) 119 ಸೆಕ್ಷನ್ ಕಂಟ್ರೋಲರ್ ಹಾಗೂ 6,565 ಟೆಕ್ನೀಷಿಯನ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.

Ad Widget ... .. Ad Widget .

ಸೆಕ್ಷನ್ ಕಂಟ್ರೋಲರ್ ಹುದ್ದೆಗಳು CEN No. 03/2026 ಅಧಿಸೂಚನೆಯಡಿ ಭರ್ತಿಯಾಗಲಿದ್ದು, ಅರ್ಜಿ ಪ್ರಕ್ರಿಯೆ 2026ರ ಜುಲೈ 15ರಿಂದ ಆರಂಭವಾಗುತ್ತದೆ. ಅಭ್ಯರ್ಥಿಗಳು ಆಗಸ್ಟ್ 14ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಹರಾಗಿದ್ದಾರೆ.

Ad Widget

ಸೆಕ್ಷನ್ ಕಂಟ್ರೋಲರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 2026ರ ಜುಲೈ 1ರಂತೆ 20 ರಿಂದ 30 ವರ್ಷಗಳೊಳಗೆ ಇರಬೇಕು. ಸರ್ಕಾರದ ನಿಯಮಾನುಸಾರ ಎಸ್‌ಸಿ, ಎಸ್‌ಟಿ, ಒಬಿಸಿ, ಅಂಗವಿಕಲ ಅಭ್ಯರ್ಥಿಗಳು ಸೇರಿದಂತೆ ಮೀಸಲಾತಿ ವರ್ಗಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹35,400 ಮೂಲ ವೇತನ ಜೊತೆಗೆ ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ವಿವಿಧ ಭತ್ಯೆಗಳು ದೊರೆಯಲಿವೆ. ಅರ್ಜಿ ಶುಲ್ಕ ಸಾಮಾನ್ಯ ಅಭ್ಯರ್ಥಿಗಳಿಗೆ ₹500 ಆಗಿದ್ದು, ಮಹಿಳೆಯರು, ಎಸ್‌ಸಿ, ಎಸ್‌ಟಿ, ಮಾಜಿ ಸೈನಿಕರು, ಪಿಡಬ್ಲ್ಯೂಬಿಡಿ, ಟ್ರಾನ್ಸ್‌ಜೆಂಡರ್ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ₹250 ನಿಗದಿಪಡಿಸಲಾಗಿದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ (CBT) ಹಾಜರಾಗುವ ಅರ್ಹ ಅಭ್ಯರ್ಥಿಗಳಿಗೆ ನಿಗದಿತ ಮೊತ್ತ ಮರುಪಾವತಿ ಮಾಡಲಾಗುತ್ತದೆ.

ಇದರ ಜೊತೆಗೆ, 6,565 ಟೆಕ್ನೀಷಿಯನ್ ಹುದ್ದೆಗಳಿಗೂ ರೈಲ್ವೆ ನೇಮಕಾತಿ ಮಂಡಳಿ ಅರ್ಜಿ ಆಹ್ವಾನಿಸಿದೆ. ಐಟಿಐ, ಡಿಪ್ಲೊಮಾ ಅಥವಾ ಸಂಬಂಧಿತ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಟೆಕ್ನೀಷಿಯನ್ ಹುದ್ದೆಗಳಿಗೆ ಜುಲೈ 29 ಕೊನೆಯ ದಿನಾಂಕವಾಗಿದ್ದು, ನೇಮಕಾತಿ ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ನಡೆಯಲಿದೆ.

ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ವಿದ್ಯಾರ್ಹತೆ, ವಯೋಮಿತಿ, ಆಯ್ಕೆ ವಿಧಾನ ಹಾಗೂ ಇತರೆ ನಿಯಮಗಳನ್ನು ಪರಿಶೀಲಿಸಿ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವುದು ಸೂಕ್ತ. ಹೆಚ್ಚಿನ ವಿವರಗಳಿಗೆ ರೈಲ್ವೆ ಇಲಾಖೆಯ ಅಧಿಕೃತ ವೆಬ್ ಸೈಟ್ www.indianrailways.gov.in ಗೆ ಭೇಟಿ ನೀಡಿ.

Leave a Comment

Your email address will not be published. Required fields are marked *