ಅರಣ್ಯ ಇಲಾಖೆಯಲ್ಲಿ 750 ವೀಕ್ಷಕ ಹುದ್ದೆಗೆ ಶೀಘ್ರ ನೇಮಕಾತಿ

ಸಮಗ್ರ ನ್ಯೂಸ್: ಪ್ರಕೃತಿ ಸೇವೆ ಹಾಗೂ ವನ್ಯಜೀವಿಗಳ ರಕ್ಷಣೆಯಲ್ಲಿ ಆಸಕ್ತಿ ಹೊಂದಿರುವ ಯುವಕರಿಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. ಕರ್ನಾಟಕ ಅರಣ್ಯ ಇಲಾಖೆಯು ರಾಜ್ಯಾದ್ಯಂತ ಖಾಲಿ ಇರುವ ಒಟ್ಟು 750 ಅರಣ್ಯ ವೀಕ್ಷಕ ಹುದ್ದೆಗಳ ಭರ್ತಿಗೆ ಶೀಘ್ರದಲ್ಲೇ ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಿದೆ .

Ad Widget ... .. Ad Widget .

ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ ಎಸ್‌ಎಸ್‌ಎಲ್‌ಸಿ (SSLC) ಅಥವಾ 10ನೇ ತರಗತಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಇನ್ನು ಅಭ್ಯರ್ಥಿಗಳ ವಯಸ್ಸು 18 ರಿಂದ 32 ವರ್ಷಗಳ ಒಳಗಿರಬೇಕು (ಸರ್ಕಾರಿ ನಿಯಮಾವಳಿಗಳ ಪ್ರಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ).

Ad Widget

ಅರಣ್ಯ ರಕ್ಷಣೆಯ ಜವಾಬ್ದಾರಿ ಇರುವುದರಿಂದ ಅಭ್ಯರ್ಥಿಗಳಿಗೆ ದೈಹಿಕ ಕ್ಷಮತೆ ಮತ್ತು ಜಾಣ್ಮೆ ಪರೀಕ್ಷೆ (Physical Fitness Test) ಕಡ್ಡಾಯವಾಗಿರುತ್ತದೆ. ಅರ್ಹ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕಾಗುತ್ತದೆ.

ಅಧಿಕೃತ ಅಧಿಸೂಚನೆ ಮತ್ತು ಆನ್‌ಲೈನ್ ಅರ್ಜಿ ಸಲ್ಲಿಕೆಯ ದಿನಾಂಕಗಳು ಶೀಘ್ರದಲ್ಲೇ ಪ್ರಕಟವಾಗಲಿದ್ದು, ಆಸಕ್ತರು ಇಲಾಖೆಯ ಅಧಿಕೃತ ಜಾಲತಾಣವಾದ aranya.karnataka.gov.in ಗೆ ಭೇಟಿ ನೀಡುತ್ತಿರಲು ಕೋರಲಾಗಿದೆ. ‘ನಮ್ಮ ಕಾಡುಗಳು ಮತ್ತು ವನ್ಯಜೀವಿಗಳನ್ನು ರಕ್ಷಿಸಲು ನಮ್ಮೊಂದಿಗೆ ಕೈಜೋಡಿಸಿ’ ಎಂದು ಇಲಾಖೆ ಕರೆ ನೀಡಿದೆ.

Leave a Comment

Your email address will not be published. Required fields are marked *