ರಾಯಚೂರು ನಗರ ವಿಧಾನಸಭಾ ಕ್ಷೇತ್ರ ಶಾಸಕ ಸೈಯದ್ ಯಾಸೀನ್ ನಿಧನ

ಸಮಗ್ರ ನ್ಯೂಸ್: ರಾಯಚೂರು ನಗರ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಸೈಯದ್ ಯಾಸೀನ್ (74) ಅನಾರೋಗ್ಯದ ಕಾರಣ ಇಂದು ಬೆಳಿಗ್ಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಸೈಯದ್ ಯಾಸೀನ್ ಅವರು ಪತ್ನಿ, ನಾಲ್ಕು ಜನ ಗಂಡು ಮಕ್ಕಳು ಹಾಗೂ ಅಪಾರ ಬಂಧು – ಬಳಗ, ಅಭಿಮಾನಿಗಳನ್ನು ಬಿಟ್ಟು ಅಗಲಿದ್ದಾರೆ.

Ad Widget ... .. Ad Widget .

ಸೈಯದ್ ಯಾಸೀನ್ ಅವರು ಕೇಂದ್ರದ ಮಾಜಿ ಸಚಿವ ಸಿ.ಕೆ. ಜಾಫ‌ರ್ ಷರೀಫ ಅವರ ಅಳಿಯರಾಗಿದ್ದು, ರಾಯಚೂರು ನಗರ ವಿಧಾನಸಭಾ ಕ್ಷೇತ್ರದಿಂದ ಆರು ಸಲ ಸ್ಪರ್ಧಿಸಿದ್ದರು, ರಾಯಚೂರು ನಗರ ವಿಧಾನಸಭಾ ಕ್ಷೇತ್ರದಿಂದ 1999 ಹಾಗೂ 2008ರಲ್ಲಿ ಶಾಸಕರಾಗಿ ಅಯ್ಕೆಯಾಗಿದ್ದರು.

Ad Widget

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು, ಕೆಪಿಸಿಸಿಯ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಅಧ್ಯಕ್ಷರಾಗಿ ಪಕ್ಷ ಸಂಘಟನೆಯ ಜವಾಬ್ದಾರಿಯು ಸಹ ನಿರ್ವಹಿಸಿದ್ದರು. ಅವರ ಅಂತ್ಯಕ್ರಿಯೆ ರವಿವಾರ ಸಂಜೆ ನಗರದ ಕಮಲಿವಾಲೆ ಬಾಬಾ ಖಬರಸ್ಥಾನದಲ್ಲಿ ನೆರವೇರಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *