ಕೊಲ್ಲೂರಿಗೆ ಹೆಣ್ಣಾನೆ ಇದ್ರೆ ದಾನ ಮಾಡಿ| ಕೇರಳಕ್ಕೆ ಪತ್ರ ಬರೆದ ಸಿಎಂ ಡಿಕೆಶಿ

ಸಮಗ್ರ ನ್ಯೂಸ್: ಐತಿಹಾಸಿಕ ಮತ್ತು ಧಾರ್ಮಿಕ ಹಿನ್ನೆಲೆಯುಳ್ಳ ಕರ್ನಾಟಕದ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಧಾರ್ಮಿಕ ವಿಧಿವಿಧಾನಗಳಿಗಾಗಿ ಹೆಣ್ಣು ಸಾಕಾನೆಯೊಂದನ್ನು ದಾನವಾಗಿ ನೀಡುವಂತೆ ಕರ್ನಾಟಕ ಸರ್ಕಾರವು ಕೇರಳ ಸರ್ಕಾರಕ್ಕೆ ಅಧಿಕೃತ ವಿನಂತಿ ಮಾಡಿದೆ.

. Ad Widget . Ad Widget . Ad Widget .

ನೆರೆರಾಜ್ಯಗಳಿಗೆ ಸಾಕಾನೆಗಳನ್ನು ದಾನ ಮಾಡುವ ಅಥವಾ ವರ್ಗಾವಣೆ ಮಾಡುವಂತೆ ಕೇರಳ ಅರಣ್ಯ ಇಲಾಖೆಯ ಮೇಲೆ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದೆ. ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇರಳದ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರಿಗೆ ಈ ಕುರಿತು ಪತ್ರ ಬರೆದಿದ್ದು, ಕೇರಳದ ಯಾವುದೇ ದೇವಸ್ಥಾನದಿಂದ ಇಚ್ಛಾಪೂರ್ವಕವಾಗಿ ಹೆಣ್ಣು ಆನೆಯೊಂದನ್ನು ದಾನವಾಗಿ ನೀಡಲು ಅನುಕೂಲ ಮಾಡಿಕೊಡಬೇಕು ಎಂದು ಕೋರಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಸಾಂಪ್ರದಾಯಿಕ ಧಾರ್ಮಿಕ ಆಚರಣೆಗಳು ಮತ್ತು ದೇವಸ್ಥಾನದ ಆಚರಣೆಗಳಲ್ಲಿ ಭಾಗವಹಿಸಲು ಆನೆಯ ಅಗತ್ಯವಿದೆ. ಚಾಲ್ತಿಯಲ್ಲಿರುವ ಎಲ್ಲಾ ಕಾನೂನು ನಿಬಂಧನೆಗಳು ಮತ್ತು ನಿಯಮಾವಳಿಗಳಿಗೆ ಬದ್ಧವಾಗಿಯೇ ಈ ಆನೆ ದಾನದ ಪ್ರಕ್ರಿಯೆಗೆ ನೆರವಾಗಬೇಕು ಎಂದು ಸಿಎಂ ಡಿ.ಕೆ. ಶಿವಕುಮಾರ್ ಪತ್ರದಲ್ಲಿ ವಿನಂತಿಸಿದ್ದಾರೆ. ಕೇರಳ ಸರ್ಕಾರದ ಈ ತ ನಡೆ ಉಭಯ ರಾಜ್ಯಗಳ ನಡುವಿನ ಶತಮಾನಗಳಷ್ಟು ಹಳೆಯದಾದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ ಎಂದು ಅವರು ಆಶಯ ವ್ಯಕ್ತಪಡಿಸಿದ್ದಾರೆ.

Leave a Comment

Your email address will not be published. Required fields are marked *