ತಿರುಪತಿಯಲ್ಲಿ ಆರತಿ ವಿಚಾರವಾಗಿ ಸಿಡಿದೆದ್ದ ಟಿಟಿಡಿ| ಕರ್ನಾಟಕ ಸಿಎಂ ಪತ್ರಕ್ಕೆ ಮಂಗಳಾರತಿ

ಸಮಗ್ರ ನ್ಯೂಸ್: ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದ ಮಂಗಳಾರತಿ ಪ್ರೋಟೋಕಾಲ್ ಬದಲಾವಣೆ ಹಾಗೂ ವಿಐಪಿ ಪ್ರವೇಶಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಪ್ರಸ್ತಾವನೆಗೆ ಟಿಟಿಡಿ ಮಂಡಳಿ ಆಕ್ಷೇಪಣೆ ವ್ಯಕ್ತಪಡಿಸಿದೆ.

Ad Widget ... .. Ad Widget .

ತಿರುಪತಿ ದೇವಸ್ಥಾನದ ವ್ಯವಹಾರಗಳನ್ನು ನೋಡಿಕೊಳ್ಳುವ ಟಿಟಿಡಿ ಮಂಡಳಿಯ ಸದಸ್ಯ ಭಾನು ಪ್ರಕಾಶ್ ರೆಡ್ಡಿ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ‘ಅತ್ಯಂತ ಪವಿತ್ರವಾದ ಹಿಂದೂ ಧಾರ್ಮಿಕ ಸ್ಥಳಗಳಲ್ಲಿ ಒಂದಾಗಿರುವ ತಿರುಪತಿಯನ್ನು ರಾಜಕೀಯ ಕ್ಷೇತ್ರವನ್ನಾಗಿ ಮಾಡಬೇಡಿ. ಆರತಿಯ ಪ್ರಸ್ತುತ ಪ್ರೋಟೋಕಾಲ್‌ಗಳನ್ನು ನಿಮಗಾಗಿ ಬದಲಾಯಿಸಲಾಗುವುದಿಲ್ಲ,’ ಎಂದು ಹೇಳುವ ಮೂಲಕ ಕರ್ನಾಟಕದ ಸಿಎಂ ಡಿ.ಕೆ.ಶಿವಕುಮಾರ್ ಅವರ ಪ್ರಸ್ತಾವನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

Ad Widget

ಬೆಂಗಳೂರಿನಲ್ಲಿ ನಡೆದ ಷಣ್ಮುಖ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್ ಅವರು, ‘ತಿರುಪತಿಯಲ್ಲಿ ಪ್ರತಿದಿನ ನಡೆಯುವ ಮೊದಲ ಆರತಿಯ ಹಕ್ಕು ಕರ್ನಾಟಕಕ್ಕೆ ಸೇರಿದ್ದಾಗಿದೆ. ಸದ್ಯ ದೇಗುಲದ ಒಳ ಮುಖ್ಯದ್ವಾರದ ಬಳಿ ತೆರಳಿ ಪೂಜೆ ಮಾಡಲು ರಾಜ್ಯದ ಮುಖ್ಯಮಂತ್ರಿಗಳಿಗೆ ಮಾತ್ರ ಅವಕಾಶವಿದೆ. ಇಲ್ಲವೇ ಸರ್ಕಾರದ ವಿಶೇಷ ಅಧಿಕಾರಿಯೊಬ್ಬರು ಈ ಆರತಿಯನ್ನು ಸ್ವೀಕರಿಸುತ್ತಾರೆ. ಇನ್ಮುಂದೆ ರಾಜ್ಯದ ಸಚಿವರು, ಶಾಸಕರು, ಸಂಸದರು, ನ್ಯಾಯಾಧೀಶರು ಹಾಗೂ ಹಿರಿಯ ಅಧಿಕಾರಿಗಳು ತಿರುಪತಿಗೆ ಭೇಟಿ ನೀಡಿದಾಗ ಈ ಅವಕಾಶ ಸಿಗುವಂತೆ ಅಧಿಕೃತ ಆದೇಶ ಹೊರಡಿಸಲಾಗುವುದು,’ ಎಂದು ತಿಳಿಸಿದ್ದರು.

ಅನೇಕ ಶಾಸಕರು, ಜನಪ್ರತಿನಿಧಿಗಳು ತಿರುಪತಿಗೆ ಹೋದಾಗ ದರ್ಶನ ಸಿಗದೇ ವಾಪಸ್‌ ಬಂದಿದ್ದಾರೆ. ಈಗ ದೇವರ ಮುಂದೆ ನಿಂತು ಆರತಿ ಪಡೆಯಲು ಅವಕಾಶ ನೀಡಲಾಗುವುದು. ಈ ರಾಜ್ಯದ ಸೇವೆ ಮಾಡುವವರಿಗೆ ದೇವರಲ್ಲಿ ಪ್ರಾರ್ಥನೆ ಮಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ,’ ಎಂದು ಕರ್ನಾಟಕ ಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದರು. ಆದರೆ ಇದಕ್ಕೆ ಟಿಟಿಡಿ ಆಕ್ಷೇಪ ವ್ಯಕ್ತಪಡಿಸಿದೆ.

Leave a Comment

Your email address will not be published. Required fields are marked *