ಕಣ್ಮರೆಯಾದ ಮುಂಗಾರು ಮಳೆ| ಕರಾವಳಿ, ಉತ್ತರ ಕರ್ನಾಟಕಕ್ಕೆ ಬಿಸಿಗಾಳಿ ಮುನ್ಸೂಚನೆ

ಸಮಗ್ರ ನ್ಯೂಸ್: ಕರ್ನಾಟಕದ ಹೆಚ್ಚಿನ ಭಾಗದಲ್ಲಿ ನಾಲ್ಕೈದು ದಿನದಿಂದ ಮುಂಗಾರು ಮಳೆಯಾಗಿ ಬಿಸಿಲ ವಾತಾವರಣ ಶುರುವಾಗಿದೆ. ಎರಡು ದಿನದಿಂದ ಬಿಸಿಲ ಪ್ರಮಾಣ ಏರಿಕೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುವ ಮುನ್ನೆಚ್ಚರಿಕೆ ನೀಡಲಾಗಿದೆ.

Ad Widget ... .. Ad Widget .

ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಗಾಳಿ ಮತ್ತು ತೇವಾಂಶ ಪರಿಸ್ಥಿತಿಗಳು ಹೆಚ್ಚಾಗಿರುವ ಸಾಧ್ಯತೆಯಿದೆ. ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರವು ಮುನ್ಸೂಚನೆ ನೀಡಿದೆ.

Ad Widget

ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಗಾಳಿಯೊಂದಿಗೆ (ಗಂಟೆಗೆ 30-40 ಕಿ.ಮೀ.) ಕೂಡಿದ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಕರ್ನಾಟಕ ಒಂದೆರಡು ಕಡೆಗಳಲ್ಲಿ ಸಾಧಾರಣ ಗಾಳಿ (ಗಂಟೆಗೆ 30-40 ಕಿ.ಮೀ.) ಬೀಸುವ ಸಾಧ್ಯತೆಯಿದೆ.

ಕೊಡಗು ಮತ್ತು ಹಾಸನ ಜಿಲ್ಲೆಗಳು. ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಗಾಳಿ (ಗಂಟೆಗೆ 30-40 ಕಿ.ಮೀ.) ಬೀಸುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ ತಿಳಿಸಿದೆ.

Leave a Comment

Your email address will not be published. Required fields are marked *