ಸಮಗ್ರ ನ್ಯೂಸ್: ಕರ್ನಾಟಕದ ವಿವಿಧ ಭಾಗಗಳಲ್ಲಿ ವಾರಾಂತ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ಕರಾವಳಿ ಭಾಗದ ಕೆಲವು ಕಡೆಗಳಲ್ಲಿ ಭೂಕುಸಿತವಾಗುವ ಮುನ್ನೆಚ್ಚೆರಿಕೆಯನ್ನು ನೀಡಲಾಗಿದೆ. ಮುಂದಿನ ಮೂರು ದಿನಗಳ ಮಳೆ, ಹವಾಮಾನ ಕುರಿತ ಮಾಹಿತಿಯನ್ನು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರವು ಹವಾಮಾನ ಇಲಾಖೆ ವರದಿ ಆಧರಿಸಿ ಬಿಡುಗಡೆ ಮಾಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಜುಲೈ 17 ಹಾಗೂ 18ರಂದು ಮಳೆಯಾಗಲಿದೆ.
ಶುಕ್ರವಾರ ಸಂಜೆ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳ ಕೆಲವೆಡೆ ಭಾರಿಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದಲ್ಲದೇ ಕರಾವಳಿ ಜಿಲ್ಲೆಗಳಲ್ಲಿ ಜುಲೈ 18 ಹಾಗೂ 19ರಂದು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜುಲೈ 18ರಂದು ಒಂದೆರಡು ಕಡೆ ಭಾರಿ ಮಳೆಯಾಗಲಿದ್ದು, ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.








