ಸಮಗ್ರ ನ್ಯೂಸ್: : ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು.18ರ ಶನಿವಾರ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕಳೆದ ಎರಡು ದಿನಗಳಿಂದ ಜಿಲ್ಲಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿರುವುದು, ರಸ್ತೆಗಳಲ್ಲಿ ಸಂಚಾರಕ್ಕೆ ತೊಂದರೆ ಉಂಟಾಗಿರುವುದು ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಪಾಲಕರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಆಡಳಿತ ಮನವಿ ಮಾಡಿದೆ.







