ಸಮಗ್ರ ನ್ಯೂಸ್: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಮರುತನಿಖೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆದಿದ್ದು, ಪ್ರಕರಣದ ಕುರಿತು ಯಾವುದೇ ಅಂತಿಮ ಆದೇಶವನ್ನು ಮತ್ತೆ ಕಾಯ್ದಿರಿಸಿದೆ.
ಈ ಹಿಂದೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪ್ರಕರಣದ ಮರು ತನಿಖೆ ನಡೆಸುವಂತೆ ಕೋರಿ ಸೌಜನ್ಯ ತಾಯಿ ಕುಸುಮಾವತಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಜು . 14ರಂದು ಈ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಆದೇಶವನ್ನು ಜು.21ಕ್ಕೆ ಮುಂದೂಡಿತ್ತು. ಅಲ್ಲದೇ ಕೆಲವು ಪ್ರಮುಖ ಸಾಕ್ಷಿಗಳು ಸಂಶಯಾಸ್ಪದವಾಗಿ ಸಾವನ್ನಪ್ಪಿರುವ ಹಿನ್ನೆಲೆ ಸಾಕ್ಷಿಗಳಿಗೆ ಕೂಡಲೇ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ಸೂಚಿಸಿತ್ತು.
ಇಂದು ಮತ್ತೆ ವಿಚಾರಣೆ ನಡೆಸಿದ ಕೋರ್ಟ್ ಈ ಹಿಂದೆ ಸಿಬಿಐ ನಡೆಸಿದ್ದ ತನಿಖೆ ಕುರಿತು ತರಾಟೆಗೆ ತೆಗೆದುಕೊಂಡಿದೆ. ಅಲ್ಲದೇ ಪ್ರಕರಣದ ಮರು ತನಿಖೆ ಆದೇಶವನ್ನು ಕಾಯ್ದಿರಿಸಿದೆ.







