ಸಮಗ್ರ ನ್ಯೂಸ್: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಅಕ್ರಮ ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆಯುತ್ತಿದ್ದ ವಿದ್ಯಾರ್ಥಿಗಳ ಪ್ರತಿಭಟನೆ, ಆಕ್ರೋಶಕ್ಕೆ ಕೊನೆಗೂ ಕೇಂದ್ರ ಸರ್ಕಾರ ಮಣಿದಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ನೀಟ್ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ, ಆಕ್ರೋಶಗಳು ವ್ಯಕ್ತವಾಗಿತ್ತು. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಒತ್ತಾಯಿಸಿದ್ದವು. ಅಲ್ಲದೇ ದೆಹಲಿಯ ಜಂತರ್-ಮಂತರ್ ನಲ್ಲಿ ವಿದ್ಯಾರ್ಥಿಗಳು ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ಮುಂದುವರೆಸಿದ್ದರು. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ ಸರ್ಕಾರ ಕೊನೆಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆದಿದೆ.
ಪ್ರಧಾನಿ ನರೇಂದ್ರ ಮೋದಿಯವರಿಗೆ ಸುದೀರ್ಘ ಪತ್ರ ಬರೆದಿರುವ ಧರ್ಮೇಂದ್ರ ಪ್ರಧಾನ್, ದೇಶ ನಿರ್ಮಾಣವಾಗುವ ಪರಿಸ್ಥಿತಿಯ ಲಾಭವನ್ನು ರಾಷ್ಟ್ರ ವಿರೋಧಿ ಶಕ್ತಿಗಳು ಪಡೆಯಬಾರದು. ದೇಶದ ಏಕತೆ ಹಾಗೆಯೇ ಇಳಿಯಬೇಕು. ವಿದ್ಯಾರ್ಥಿಗಳ ಭವಿಷ್ಯವು ಕಾನೂನು ತೊಡಕುಗಳಲ್ಲಿ ಸಿಲುಕಬಾರದು ನಮ್ಮ ಮಕ್ಕಳು ತಮ್ಮ ಭವಿಷ್ಯವನ್ನು ಓದಿನಲ್ಲಿ ಕಳೆಯಬೇಕು. ವೃತ್ತಿ ಜೀವನವನ್ನು ರೂಪಿಸಿಕೊಳ್ಳುವತ್ತ ಗಮನ ಹರಿಸಬೇಕು. ಇದನ್ನು ಪರಿಗಣಿಸಿ ನಾನು ನನ್ನ ರಾಅಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.








