ಜು.29ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ| ಆರೆಂಜ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಕರಾವಳಿ ಕರ್ನಾಟಕ ಭಾಗದಲ್ಲಿ ವಾಡಿಕೆಯಂತೆ ಪುಷ್ಯ ನಕ್ಷತ್ರದ ಮಳೆಯು ತೀವ್ರ ಸ್ವರೂಪ ಪಡೆಯಲಿದ್ದು, ಮುಂದಿನ ಕೆಲ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜುಲೈ 29ರಂದು ಉಡುಪಿ, ದ.ಕ‌ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಶಕ್ತಿಶಾಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

Ad Widget ... .. Ad Widget .

ಮಳೆಯ ತೀವ್ರತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಾದ್ಯಂತ ‘ಆರೆಂಜ್ ಅಲರ್ಟ್’ ಜಾರಿಗೊಳಿಸಲಾಗಿದೆ. ಕರಾವಳಿ ಜಿಲ್ಲೆಗಳ ಸಾರ್ವಜನಿಕರು ಹಾಗೂ ಮೀನುಗಾರರು ಅಗತ್ಯ ಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ.

Ad Widget

ಜುಲೈ 29 ಮತ್ತು 30ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲಿ ಅತಿ ಭಾರೀ ಮಳೆ ಹಾಗೂ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಜುಲೈ 31ರಂದು ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲೂ ಭಾರೀ ಮಳೆಯೊಂದಿಗೆ 30-40 ಕಿ.ಮೀ. ವೇಗದ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ. ಆಗಸ್ಟ್ 1ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ

Leave a Comment

Your email address will not be published. Required fields are marked *