ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಭಾಗದಲ್ಲಿ ಜುಲೈ 30ರ ಮಲ ಭಾರಿಯಿಂದ ಅತಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ನೀಡಿದೆ.

Ad Widget ... .. Ad Widget .

ರಾಜ್ಯದ ಹಾಸನ, ಕೊಡಗು, ವಿಜಯಪುರ, ಯಾದಗಿರಿ ಜಿಲ್ಲೆಯಲ್ಲಿ ಜುಲೈ 30ರಂದು, ಧಾರವಾಡ, ಗದಗ, ಹಾಸನ, ಕೊಡಗು ಜಿಲ್ಲೆಯಲ್ಲಿ ಜುಲೈ 31ರಂದು, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾಸನ ಹಾಗೂ ಕೊಡಗು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಆಗಸ್ಟ್‌ 1ರಂದು ಭಾರೀ ಮಳೆಯಾಗಲಿದ್ದು ಯಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

Ad Widget

ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಜುಲೈ 30ರಂದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜುಲೈ 31ರಂದು ಹಾಗೂ ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿಯಿಂದ ಅತಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದ್ದು. ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಭಾರಿ ಅಥವಾ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

Leave a Comment

Your email address will not be published. Required fields are marked *