ಇಂದು ರಾಜ್ಯಾದ್ಯಂತ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ| ಪರೀಕ್ಷಾ ಕೇಂದ್ರಗಳಿಗೆ ಬಿಗಿ ಭದ್ರತೆ

ಸಮಗ್ರ ನ್ಯೂಸ್: ಪೊಲೀಸ್ ನೇಮಕಾತಿಗಾಗಿ ಇಂದು(ಆ.2) ರಾಜ್ಯಾದ್ಯಂತ 800ಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ. 3991 ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪರೀಕ್ಷೆ ನಡೆಸಲಿದ್ದು 4.54 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

Ad Widget ... .. Ad Widget .

ಇದೇ ಮೊದಲ ಬಾರಿಗೆ ಒಎಂಆರ್ ಶೀಟ್ ಗಳನ್ನು ಇಂದೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ ಗೆ ಅಪ್ಲೋಡ್ ಮಾಡಲಾಗುವುದು. 3991 ಹುದ್ದೆಗಳಿಗೆ 4.54 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಇದೇ ಮೊದಲ ಬಾರಿಗೆ ಅಭ್ಯರ್ಥಿಗಳ ಒಎಂಆರ್ ಶೀಟ್ ಗಳನ್ನು ಪ್ರಾಧಿಕಾರದ ವೆಬ್ಸೈಟ್ ಗೆ ಇಂದೇ ಪರೀಕ್ಷೆ ಮುಗಿದ ಅರ್ಧ ಗಂಟೆ ಒಳಗೆ ಅಪ್ಲೋಡ್ ಮಾಡಲಾಗುವುದು.

Ad Widget

ನೋಂದಣಿ ಸಂಖ್ಯೆ ಸೇರಿದಂತೆ ಪ್ರತಿ ಮಾಹಿತಿ ಎಲ್ಲರಿಗೂ ಲಭ್ಯವಾಗಿರುತ್ತದೆ. ವಿಶೇಷವಾಗಿ ಪ್ರಶ್ನೆಗೆ ಉತ್ತರ ಗೊತ್ತಿಲ್ಲ ಎಂದು ಖಾಲಿ ಬಿಡುವಂತಿಲ್ಲ. ಒಎಂಆರ್ ಶೀಟ್ ನಲ್ಲಿ ಉತ್ತರ ಖಾಲಿ ಬಿಟ್ಟರೆ 1 / 4 ಅಂಕ ಕಡಿತ ಮಾಡಲಾಗುವುದು.

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಆಗಸ್ಟ್ 2ರಂದು ನಡೆಯಲಿರುವ ಲಿಖಿತ ಪರೀಕ್ಷೆಯಲ್ಲಿ ಯಾವುದೇ ಅಕ್ರಮ ಅಥವಾ ಲೋಪಗಳಿಗೆ ಆಸ್ಪದ ನೀಡದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಪರೀಕ್ಷೆಯನ್ನು ಸಂಪೂರ್ಣವಾಗಿ ಪಾರದರ್ಶಕವಾಗಿ ನಡೆಸಲು ಪ್ರಶ್ನೆಪತ್ರಿಕೆಯು ಪರೀಕ್ಷಾ ಕೇಂದ್ರವನ್ನು ತಲುಪಿದ ನಂತರ ಪ್ರಾಂಶುಪಾಲರ ನೇತೃತ್ವದಲ್ಲಿ ಹಾಗೂ ಐವರು ಅಭ್ಯರ್ಥಿಗಳ ಸಮ್ಮುಖದಲ್ಲಿಯೇ ಸೀಲ್ ತೆರೆಯುವಂತೆ ಆದೇಶಿಸಲಾಗಿದೆ. ನಕಲು ಎಸಗಲು ಅವಕಾಶ ನೀಡದಂತೆ ವಿವಿಧ ವಸ್ತುಗಳನ್ನು ಪರೀಕ್ಷಾ ಕೇಂದ್ರದೊಳಗೆ ತರುವುದನ್ನು ನಿರ್ಬಂಧಿಸಲಾಗಿದೆ. ಆದರೆ ಧಾರ್ಮಿಕ ನಂಬಿಕೆಯನ್ನು ಗೌರವಿಸಲು ಶಿವದಾರ, ಜನಿವಾರ, ಮಾಂಗಲ್ಯಸರ ಮುಂತಾದವುಗಳನ್ನು ಧರಿಸಲು ಅನುಮತಿ ನೀಡಲಾಗಿದೆ.

ಈ ಹಿಂದೆ ವಿವಿಧ ನೇಮಕಾತಿಗಳಲ್ಲಿ ಪರೀಕ್ಷೆ ಮುಗಿದ ಬಳಿಕ ಉತ್ತರ ಪತ್ರಿಕೆಯನ್ನು ತಿದ್ದಿದ ಆರೋಪಗಳು ಕೇಳಿಬಂದಿದ್ದರಿಂದ, ಈ ಬಾರಿ ಒಎಂಆರ್ ಶೀಟ್‌ನಲ್ಲಿ ಐದನೇ ಆಯ್ಕೆಯನ್ನು ನೀಡಲಾಗಿದೆ. ಪ್ರಶ್ನೆಗೆ ಉತ್ತರ ಗೊತ್ತಿಲ್ಲದವರು ಒಎಂಆರ್ ಶೀಟ್‌ನಲ್ಲಿ ಖಾಲಿ ಬಿಡುವಂತಿಲ್ಲ. 5ನೇ ಕಾಲಂ ಅನ್ನು ಕಡ್ಡಾಯವಾಗಿ ಶೇಡ್ ಮಾಡಬೇಕು. ಯಾವುದೇ ಉತ್ತರ ಗುರುತಿಸದೆ ಇದ್ದಲ್ಲಿ ಅಂಕವನ್ನು ಕಡಿತಗೊಳಿಸಲಾಗುತ್ತದೆ. ಪರೀಕ್ಷೆ ಮುಗಿದ 30 ನಿಮಿಷದೊಳಗೆ ಒಎಂಆರ್ ಶೀಟ್ ಅನ್ನು ಕೆಇಎ ವೆಬ್‌ಸೈಟ್‌ಗೆ ಅಪ್ಲೋಡ್ ಮಾಡುವಂತೆ ವ್ಯವಸ್ಥೆ ಮಾಡಲಾಗಿದೆ.

ಪ್ರತಿ ಪರೀಕ್ಷಾ ಕೊಠಡಿಯಲ್ಲಿಯೂ ಹೈ ಡೆಫಿನಿಷನ್ ಕ್ಯಾಮೆರಾ, ಲೈವ್ ವೆಬ್‌ಕಾಸ್ಟಿಂಗ್, ನೆಟ್‌ವರ್ಕ್ ಜಾಮರ್, ಬೆರಳಚ್ಚು ಬಯೋಮೆಟ್ರಿಕ್ ಮತ್ತು ಮುಖಗುರುತು ಪತ್ತೆ ವ್ಯವಸ್ಥೆಯನ್ನು ಅಳವಡಿಸಲಾಗುವುದು. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ 1 ಗಂಟೆ ಮುಂಚಿತವಾಗಿ ಆಗಮಿಸಿ, ಕಡ್ಡಾಯ ತಪಾಸಣೆಗೆ ಒಳಪಡಬೇಕು. ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ಎಸಗುವುದು ಕಂಡುಬಂದರೆ ಅಂತಹ ಅಭ್ಯರ್ಥಿಗಳನ್ನು ಶಾಶ್ವತವಾಗಿ ಡಿಬಾರ್ ಮಾಡಲಾಗುತ್ತದೆ.

Leave a Comment

Your email address will not be published. Required fields are marked *