ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ತಲವಾರು ಹಿಡಿದು ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸಿ, ಜೀವ ಬೆದರಿಕೆ ಒಡ್ಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತರು ಉಳ್ಳಾಲದ ಮಾರ್ಗತಲೆ ನಿವಾಸಿ ಮೊಹಮ್ಮದ್ ಶಾಕಿರ್ ( 31) ಹಾಗೂ ಮಂಚಿಲ ನಿವಾಸಿ ಅಶ್ವಕ್ (28) ಎಂದುತಿಳಿದುಬಂದಿದೆ.
ಬಂಧಿತರ ಪೈಕಿ ಶಾಕಿರ್ ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದು , ಅಶ್ಪಕ್ ವೃತ್ತಿಯಲ್ಲಿ ಆಟೋ ಚಾಲಕ. ಈತನ ವಿರುದ್ಧ ಈಗಾಗಲೇ ರೌಡಿ ಶೀಟ್ ತೆರೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಾನೂನುಬಾಹಿರವಾಗಿ ಮಾರಕಾಸ್ತ್ರಗಳನ್ನು ಹೊಂದಿದ್ದು ಮತ್ತು ಸಾರ್ವಜನಿಕರಿಗೆ ಬೆದರಿಕೆಯೊಡ್ಡಿದ ಹಿನ್ನೆಲೆಯಲ್ಲಿ ವಿವಿಧ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ನಗರದ ಪೊಲೀಸ್ ಠಾಣೆಯಲ್ಲಿ ಬಂಧಿತರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದ್ದು, ಅವರ ಹಿನ್ನೆಲೆ ಹಾಗೂ ಈ ಕೃತ್ಯಕ್ಕೆ ಕಾರಣವೇನು ಎಂಬುದರ ತನಿಖೆ ನಡೆಯುತ್ತಿದೆ.








