ಬೆಂಗಳೂರು: 55.80 ಕೋಟಿ ಮೌಲ್ಯದ ಡ್ರಗ್ಸ್ ವಶ

ಸಮಗ್ರ ನ್ಯೂಸ್: ಮಾದಕ ವಸ್ತುಗಳ ಮಾರಾಟ, ಪೂರೈಕೆಯ ವಿರುದ್ಧ ನಗರದ ಪೊಲೀಸರು ಕೈಗೊಂಡಿರುವ ‘ಆಪರೇಷನ್‌ ರೈಸ್’ ಹಾಗೂ ‘ಬೇಡ ಬ್ರೊ’ ಕಾರ್ಯಾಚರಣೆ ಚುರುಕುಗೊಳಿಸಿದ್ದು, 39 ಡ್ರಗ್‌ ಪೆಡ್ಲರ್‌ಗಳನ್ನು ಬಂಧಿಸಿ ಅವರಿಂದ ₹55.80 ಕೋಟಿ ಮೌಲ್ಯದ ವಿವಿಧ ಮಾದರಿಯ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

Ad Widget . Ad Widget .

ಅಮೃತಹಳ್ಳಿ, ಗಿರಿನಗರ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ‌ ಠಾಣೆ, ಯಶವಂತಪುರ, ಯಲಹಂಕ, ಹೆಬ್ಬಾಳ, ನಂದಿನಿ ಲೇಔಟ್‌, ಕಾಡುಗೋಡಿ, ಮಲ್ಲೇಶ್ವರ, ಗೋವಿಂದಪುರ, ಬಾಗಲೂರು, ಮಹದೇವಪುರ, ಮಹಾಲಕ್ಷ್ಮಿ ಲೇಔಟ್‌, ಬೇಗೂರು, ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳ ಹಾಗೂ ಕೊತ್ತನೂರು ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ವಿದೇಶದ ಎಂಟು, ಹೊರ ರಾಜ್ಯಗಳ 21 ಹಾಗೂ ಸ್ಥಳೀಯ 10 ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ನಗರ ಪೊಲೀಸ್‌ ಕಮಿಷನರ್ ಸೀಮಾಂತ್‌ಕುಮಾರ್ ಸಿಂಗ್‌ ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾಹಿತಿ ನೀಡಿದರು.

Ad Widget

ಅಮೃತಹಳ್ಳಿ ಠಾಣೆಯ ಪೊಲೀಸರು ದೊಡ್ಡ ಪ್ರಮಾಣದಲ್ಲಿ ಎಂಡಿಎಂಎ ಜಪ್ತಿ ಮಾಡಿದ್ದಾರೆ. ಒಟ್ಟು ₹28.8 ಕೋಟಿ ಮೌಲ್ಯದ ಎಂಡಿಎಂಎ ವಶಕ್ಕೆ ಪಡೆದಿದ್ದಾರೆ. ದೆಹಲಿಯ ಆಮ್ನಿಸಿಂಗ್ ಮತ್ತು ನೈಜೀರಿಯಾದ ಓಬಮ್ ಎಂಬ ಪೆಡ್ಲರ್‌ಗಳನ್ನು ಅಮೃತಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು, ದೆಹಲಿಯಲ್ಲಿ ಮಾದಕವಸ್ತು ತಯಾರಿಸಿ ಬೆಂಗಳೂರಿಗೆ ತಂದು ಮಾರಾಟ ಮಾಡುತ್ತಿರುವ ಮಾಹಿತಿ ಲಭ್ಯವಾಗಿತ್ತು. ಕಳೆದ ಹತ್ತು ದಿನಗಳಿಂದ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಈಶಾನ್ಯ ವಿಭಾಗದ ಕೊತ್ತನೂರು ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಒಡಿಶಾದ ಆರೋಪಿಯನ್ನು ಬಂಧಿಸಿ ₹3.45 ಲಕ್ಷ ಮೌಲ್ಯದ ಮಾದಕ ವಸ್ತುವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯಿಂದ ಎಲೆಕ್ಟ್ರಾನಿಕ್‌ ತೂಕದ ಯಂತ್ರ ಹಾಗೂ ಒಂದು ಬ್ಯಾಗ್‌ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

Leave a Comment

Your email address will not be published. Required fields are marked *