ಬೆಳ್ಳಾರೆ: ಅಕ್ರಮ ಮರ ಸಾಗಾಟ| ಲಾರಿ‌ ಸಹಿತ ಆರೋಪಿ ವಶಕ್ಕೆ

ಬೆಳ್ಳಾರೆ: ಅಕ್ರಮವಾಗಿ ಮರ ಕಡಿದು ಲಾರಿಯಲ್ಲಿ ಸಾಗಿಸುತ್ತಿದ್ದ ಜಾಲವನ್ನು ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಭೇದಿಸಿದ್ದು, ಲಾರಿ ಹಾಗೂ ಮರದ ಸಮೇತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಮಾಡಾವು ನಿವಾಸಿ ಇಸ್ಮಾಯಿಲ್ ಬಂಧಿತ ಆರೋಪಿ.

Ad Widget . Ad Widget . Ad Widget . Ad Widget . Ad Widget . Ad Widget .

ಅಗಸ್ಟ್ 14ರಂದು ನೆಟ್ಟಾರು ಎಂಬಲ್ಲಿ ಅಕ್ರಮವಾಗಿ ಕಡಿದ ಕಿರಾಲು ಭೋಗಿ ಜಾತಿಯ ಮರದ ದಿಮ್ಮಿಗಳನ್ನು ಲಾರಿಯಲ್ಲಿ ಸಾಗಿಸಲಾಗುತ್ತಿತ್ತು. ಬೆಳ್ಳಾರೆಯಿಂದ ಪುತ್ತೂರು ಕಡೆಗೆ ಸಾಗುತ್ತಿದ್ದ ಲಾರಿಯನ್ನು ಕೆಯ್ಯೂರು ಗ್ರಾಮದ ಸಂತೋಷ್ ನಗರ ಎಂಬಲ್ಲಿ ಅರಣ್ಯ ಅಧಿಕಾರಿಗಳು ತಡೆದು ತಪಾಸಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಕಾರ್ಯಾಚರಣೆಯಲ್ಲಿ ವಶಪಡಿಸಿಕೊಳ್ಳಲಾದ ಲಾರಿ ಮತ್ತು ಮರದ ಒಟ್ಟು ಮೌಲ್ಯ ಸುಮಾರು ₹5 ಲಕ್ಷ ಎಂದು ಅಂದಾಜಿಸಲಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮಂಗಳೂರು ಅರಣ್ಯ ಸಂಚಾರಿ ದಳದ ವಲಯ ಅರಣ್ಯಾಧಿಕಾರಿ ಸಂತೋಷ್ ರೈ, ಉಪವಲಯ ಅರಣ್ಯಾಧಿಕಾರಿಗಳಾದ ಶಿವಾನಂದ, ಸೋಮನಾಥ್ ಹಾಗೂ ಚಾಲಕ ಜಯಪ್ರಕಾಶ್ ಈ ದಾಳಿಯಲ್ಲಿ ಪಾಲ್ಗೊಂಡಿದ್ದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ರೋಶಿನಿ ಎ. ಜೆ. ಅವರ ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Comment

Your email address will not be published. Required fields are marked *