ಗ್ರಾಹಕರಿಗೆ ಮತ್ತೊಂದು ಬೆಲೆ ಏರಿಕೆ ಬಿಸಿ|ಶತಕದ ಹೊಸ್ತಿಲಲ್ಲಿ ಈರುಳ್ಳಿ ದರ

ಸಮಗ್ರ ನ್ಯೂಸ್: ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಸಾಲು ಸಾಲು ಹಬ್ಬಗಳ ಸಂಭ್ರಮದಲ್ಲಿದ್ದ ಜನಸಾಮಾನ್ಯರಿಗೆ ಈರುಳ್ಳಿ ಬೆಲೆ ಏರಿಕೆ ಶಾಕ್​ ನೀಡಿದೆ. ನಿತ್ಯದ ಅಡುಗೆಯ ಅವಿಭಾಜ್ಯ ಅಂಗವಾಗಿರುವ ಈರುಳ್ಳಿಯನ್ನು ಕತ್ತರಿಸುವ ಮೊದಲೇ ಅದರ ದುಬಾರಿ ದರ ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದ್ದು, ಕೆಲವೇ ದಿನಗಳಲ್ಲಿ ಈರುಳ್ಳಿ ಬೆಲೆ ಪ್ರತಿ ಕೆಜಿಗೆ ಶತಕ ಬಾರಿಸುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.

. Ad Widget . Ad Widget . Ad Widget .

ರಾಜ್ಯದಲ್ಲಿ ಒಂದೆಡೆ ಮುಂಗಾರು ಮಳೆ ಕೊರತೆಯಿಂದ ಬರಗಾಲ ತಾಂಡವವಾಡುತ್ತಿದೆ. ಮಳೆ, ಬೆಳೆ ಇಲ್ಲದೇ ರೈತರು ಕಂಗಾಲಾಗಿದ್ದಾರೆ. ಅದರಲ್ಲೂ ಮಳೆ ಬಾರದೇ ಈ ಸಲ ಸುಮಾರು ಶೇಕಡಾ 70% ರಷ್ಟು ಈರುಳ್ಳಿ ಇಳುವರಿ ಕಡಿಮೆ ಆಗಿದೆ. ಹೀಗಾಗಿ ಮಾರುಕಟ್ಟೆಯಲ್ಲಿ ಈರುಳ್ಳಿ ದಾಸ್ತಾನು ಕಡಿಮೆಯಾಗಿದೆ. ಸದ್ಯ ಕರ್ನಾಟಕ ಮತ್ತು ಮಹಾರಾಷ್ಟ್ರದ ಈರುಳ್ಳಿ ಮಾತ್ರ ಮಾರುಕಟ್ಟೆಯಲ್ಲಿ ಲಭ್ಯವಿದೆ. ಮತ್ತೊಂದೆಡೆ, ಇಲ್ಲಿಂದ ಹೊರ ರಾಜ್ಯ ಹಾಗೂ ಹೊರ ದೇಶಗಳಿಗೆ ಈರುಳ್ಳಿ ರಫ್ತಾಗುತ್ತಿದ್ದರೂ, ಹೊರಗಿನಿಂದ ಆಮದು ಸಂಪೂರ್ಣ ಸ್ಥಗಿತಗೊಂಡಿರುವುದು ಬೆಲೆ ಗಗನಕ್ಕೇರಲು ಪ್ರಮುಖ ಕಾರಣವಾಗಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಪ್ರಸ್ತುತ ಹಾಪ್‌ಕಾಮ್ಸ್ ಮಳಿಗೆಗಳಲ್ಲಿ ಗುಣಮಟ್ಟದ ಈರುಳ್ಳಿ ಬೆಲೆ ಕೆಜಿಗೆ 70 ರಿಂದ 75 ರೂಪಾಯಿವರೆಗೆ ತಲುಪಿದೆ. ಇತ್ತ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲೇ ಕೆಜಿಗೆ 50 ರಿಂದ 60 ರೂ.ದರವಿದ್ದು, ಚಿಲ್ಲರೆ ಮಾರುಕಟ್ಟೆಯಲ್ಲಿ ಸಾಮಾನ್ಯ ಮತ್ತು ಉತ್ತಮ ಗುಣಮಟ್ಟದ ಈರುಳ್ಳಿ ಬೆಲೆ ಪ್ರತಿ ಕೆಜಿಗೆ 10 ರಿಂದ 20 ರೂಪಾಯಿ ಏರಿಕೆಯಾಗಿದೆ. ಮಾರುಕಟ್ಟೆ ತಜ್ಞರ ಪ್ರಕಾರ, ಈ ಬೆಲೆ ಏರಿಕೆಯ ಬಿಸಿ ಮುಂದಿನ ಒಂದು-ಒಂದೂವರೆ ತಿಂಗಳ ಕಾಲ ಮುಂದುವರಿಯಲಿದ್ದು, ಕೆಲವೇ ದಿನಗಳಲ್ಲಿ ಕೆಜಿ ಈರುಳ್ಳಿ ದರ 100 ರೂಪಾಯಿ ಮುಟ್ಟುವ ಸಾಧ್ಯತೆಯಿದೆ.

Leave a Comment

Your email address will not be published. Required fields are marked *