ಸಮಗ್ರ ನ್ಯೂಸ್: 16 ವರ್ಷದ ಬಾಲಕಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಪ್ರಕರಣ ಸಂಬಂಧ ಆರೋಪಿ ಶ್ರೀಕಾಂತ್ (21) ಎಂಬಾತನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
‘ಬಾಲಕಿಯ ಮೇಲೆ ಆರೋಪಿ ಶ್ರೀಕಾಂತ್ (21) ಒಂದು ವರ್ಷದ ಅವಧಿಯಲ್ಲಿ ಅತ್ಯಾಚಾರ ಮಾಡಿ, ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ. ಬಳಿಕ ಬಾಲಕಿ ಗರ್ಭಿಣಿಯಾಗಿದ್ದು, ಆ.22ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಆ.23ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಪ್ರಕರಣ ದಾಖ ಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿಯು ಬೆಂಗಳೂರಿನ ದೊಡ್ಡಬಳ್ಳಾಪುರದಿಂದ ತನ್ನ ಸ್ವಗ್ರಾಮ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಹಿಂದೂಪುರಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ ಆ.25ರಂದು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಈತ ಆಂಧ್ರಪ್ರದೇಶದ ಮೂಲದವನಾಗಿದ್ದು ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ. ಬಾಲಕಿಯನ್ನು ಪರಿಚಯ ಮಾಡಿಕೊಂಡು, ಅಕ್ರಮ ಸಂಬಂಧ ಬೆಳೆಸಿ ಅತ್ಯಾಚಾರ ನಡೆಸಿದ್ದ ಎಂದು ಆರೋಪಿಸಲಾಗಿದೆ.
ಆರೋಪಿಯನ್ನು ಬುಧವಾರ ಮಂಗಳೂರಿನ ಪೊಕ್ಸೊ ನ್ಯಾಯಾ ಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.


















