ಗ್ರಾಹಕರಿಗೆ ಬಿಗ್ ರಿಲೀಫ್| ಗ್ಯಾಸ್‌ ಸಿಲಿಂಡರ್ ಬುಕ್ಕಿಂಗ್ ಅವಧಿ ಇಳಿಕೆ

ಸಮಗ್ರ ನ್ಯೂಸ್: ಮಧ್ಯಪ್ರಾಚ್ಯ ಸಂಘರ್ಷದಿಂದ‌ ಗ್ಯಾಸ್ ಬುಕ್ಕಿಂಗ್ ಗೆ ಸಂಬಂಧಿಸಿದಂತೆ ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದ ಕೇಂದ್ರ ಸರ್ಕಾರ ಈ ನಿಯಮಗಳಲ್ಲಿ ಮತ್ತೊಮ್ಮೆ ಬದಲಾವಣೆ ಮಾಡಿದ್ದು, ಜನರಿಗೆ ಕೊಂಚ ರಿಲೀಫ್ ಸಿಕ್ಕಿದೆ.

. Ad Widget . Ad Widget

ಇತ್ತೀಚೆಗೆ ದೇಶದಲ್ಲಿ ಗ್ಯಾಸ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ, ಒಂದು ಸಿಲಿಂಡರ್ ಪಡೆದ ಬಳಿಕ ಎರಡನೇ ಸಿಲಿಂಡರ್ ಬುಕ್ ಮಾಡಲು 45 ದಿನಗಳ ಕಾಲ ಕಾಯಬೇಕು ಎಂಬ ನಿಯಮವನ್ನು ಸರ್ಕಾರ ಜಾರಿಗೆ ತಂದಿತ್ತು. ಆದರೆ ಇದೀಗ ಕೇಂದ್ರ ಸರ್ಕಾರ ಈ ನಿಯಮವನ್ನು ಬದಲಾಯಿಸಿದೆ.

. Ad Widget . . Ad Widget . Ad Widget

ಕೇಂದ್ರ ಸಚಿವ ಸುರೇಶ್ ಗೋಪಿ ಅವರ ಪ್ರಕಾರ, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಗ್ಯಾಸ್ ರೀಫಿಲ್‌ಗಳನ್ನು ನಿಗದಿತ ಅವಧಿಯೊಳಗೆ ಬುಕ್ ಮಾಡಲು ಅವಕಾಶ ನೀಡಲಾಗಿದೆ.

ಈ ಹೊಸ ನಿಯಮ ಸೆಪ್ಟೆಂಬರ್ 7, ಸೋಮವಾರದಿಂದಲೇ ಜಾರಿಗೆ ಬಂದಿದೆ. ಇನ್ನು ಮುಂದೆ ಗ್ಯಾಸ್ ಸಿಲಿಂಡರ್ ಅನ್ನು ಮರುಬುಕ್ ಮಾಡಲು ಗ್ರಾಹಕರು 45 ದಿನಗಳ ಕಾಲ ಕಾಯಬೇಕಾಗಿಲ್ಲ. ಬದಲಾಗಿ, 25 ದಿನಗಳ ಬಳಿಕವೇ ಮತ್ತೊಂದು ಸಿಲಿಂಡರ್ ಬುಕ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಇದರಿಂದ ಗ್ಯಾಸ್ ಬಳಕೆದಾರರಿಗೆ ಎದುರಾಗುತ್ತಿದ್ದ ಸಮಸ್ಯೆಗಳು ಕಡಿಮೆಯಾಗಲಿವೆ.

ಸೆಪ್ಟೆಂಬರ್ 7ರಂದು ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಈ ಬದಲಾವಣೆಗಳನ್ನು ತಕ್ಷಣದಿಂದಲೇ ಜಾರಿಗೆ ತರಲು ಕೇಂದ್ರ ಸರ್ಕಾರ ತೈಲ ಮಾರುಕಟ್ಟೆ ಕಂಪನಿಗಳಿಗೆ (OMC) ಸೂಚನೆ ನೀಡಿದೆ ಎಂದು ಸಚಿವರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *