ದ.ಕ‌ ಜಿಲ್ಲೆಯ 7 ಗ್ರಾ.ಪಂ ಮೇಲೆ‌ ಲೋಕಾಯುಕ್ತ‌ ದಾಳಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಜಿಲ್ಲೆಯ ಏಳು ಗ್ರಾಮ ಪಂಚಾಯಿತಿ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

. Ad Widget . Ad Widget

ಭ್ರಷ್ಟಾಚಾರ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಲೋಕಾಯುಕ್ತ ಪೊಲೀಸರು, ವಿವಿಧ ತಾಲೂಕುಗಳ ಒಟ್ಟು 7 ಗ್ರಾಮ ಪಂಚಾಯತಿ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ.

. Ad Widget . . Ad Widget . Ad Widget

ಸಾರ್ವಜನಿಕರಿಂದ ಸರಣಿ ಭ್ರಷ್ಟಾಚಾರ, ಖಾತಾ ಬದಲಾವಣೆ, ಸರ್ಕಾರದ ಯೋಜನೆಗಳ ಅನುಷ್ಠಾನ ಹಾಗೂ ಸಾರ್ವಜನಿಕ ಕೆಲಸಗಳಲ್ಲಿ ಅಕ್ರಮ ಮತ್ತು ಲಂಚದ ಬೇಡಿಕೆ ಕುರಿತು ಸಾಲು ಸಾಲು ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಮಹತ್ವದ ಕಾರ್ಯಾಚರಣೆ ನಡೆದಿದೆ.

ಮಂಗಳೂರು ತಾಲೂಕಿನ ಪೆರ್ಮುದೆ ಗ್ರಾಮ ಪಂಚಾಯತಿ, ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತಿ, ಮಾಣಿ ಗ್ರಾಮ ಪಂಚಾಯತಿ, ಗೊಳ್ತಮಜಲು ಗ್ರಾಮ ಪಂಚಾಯತಿ, ಪಾಣೆಮಂಗಳೂರು, ಅಡ್ಯಾರ್ ಗ್ರಾಮ ಪಂಚಾಯತಿ, ಕುವೆಟ್ಟು ಗ್ರಾಮ ಪಂಚಾಯತಿ, ಮಡಂತ್ಯಾರ್ ಗ್ರಾಮ ಪಂಚಾಯತಿ, ಕಾರವಾರ, ಉಡುಪಿ ಹಾಗೂ ಮಂಗಳೂರು ವಿಭಾಗಗಳ ಲೋಕಾಯುಕ್ತ ಅಧಿಕಾರಿಗಳ ನೇತೃತ್ವದಲ್ಲಿ ಪ್ರತ್ಯೇಕ ತಂಡಗಳನ್ನು ರಚಿಸಿ ದಾಳಿ ನಡೆಸಲಾಗಿದೆ.

Leave a Comment

Your email address will not be published. Required fields are marked *