ಸಚಿವ ಜಾರಕಿಹೋಳಿಗೆ ಶಾಕ್ ನೀಡಿದ ಇಡಿ| ಬೆಳ್ಳಂಬೆಳಗ್ಗೆ ನಿವಾಸದ ಮೇಲೆ ದಾಳಿ

ಸಮಗ್ರ ನ್ಯೂಸ್: ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಬೆಳ್ಳಂಬೆಳಗ್ಗೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಶಾಕ್ ನೀಡಿದ್ದಾರೆ ಎನ್ನಲಾಗಿದ್ದು, ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳಗಿನ ಜಾವ ಎರಡು ಕಾರುಗಳಲ್ಲಿ ಆಗಮಿಸಿದ ಇಡಿ ಅಧಿಕಾರಿಗಳ ತಂಡ, ಸಚಿವರ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ ಎನ್ನಲಾಗಿದೆ.

. Ad Widget . Ad Widget

ಸತೀಶ್ ಜಾರಕಿಹೊಳಿ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧೆಡೆ ಒಟ್ಟು 15ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ದಾಳಿಯ ವೇಳೆ ಅಧಿಕಾರಿಗಳು ದಾಖಲೆಗಳು ಮತ್ತು ಇತರೆ ಪ್ರಮುಖ ಮಾಹಿತಿಗಳನ್ನು ಪರಿಶೀಲಿಸುತ್ತಿದ್ದಾರೆ.

. Ad Widget . . Ad Widget . Ad Widget

ದಾಳಿ ಯಾವ ಪ್ರಕರಣಕ್ಕೆ ಸಂಬಂಧಿಸಿದೆ, ಯಾವ ದಾಖಲೆಗಳಿಗಾಗಿ ಶೋಧ ನಡೆಸಲಾಗುತ್ತಿದೆ ಮತ್ತು ಏನೆಲ್ಲಾ ವಸ್ತುಗಳು ಅಧಿಕಾರಿಗಳ ಕೈಗೆ ಸಿಕ್ಕಿವೆ ಎಂಬ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.ಇಡಿ ದಾಳಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಪ್ರಕರಣದ ಕುರಿತು ಅಧಿಕಾರಿಗಳ ಅಧಿಕೃತ ಮಾಹಿತಿ ನಿರೀಕ್ಷಿಸಲಾಗಿದೆ.

ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಸುತ್ತಮುತ್ತ ಭದ್ರತೆ ಹೆಚ್ಚಿಸಲಾಗಿದ್ದು, ಅಧಿಕಾರಿಗಳ ಕಾರ್ಯಾಚರಣೆ ಮುಂದುವರಿದಿದೆ. ದಾಳಿ ಯಾವ ಪ್ರಕರಣಕ್ಕೆ ಸಂಬಂಧಿಸಿದೆ ಹಾಗೂ ಅಧಿಕಾರಿಗಳು ಯಾವ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂಬ ಕುರಿತು ಇಡಿ ಅಧಿಕಾರಿಗಳಿಂದ ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

Leave a Comment

Your email address will not be published. Required fields are marked *