ಸೆ.18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ| ಪ್ರಮುಖ ರಸ್ತೆಗಳಲ್ಲಿ ಸಂಚಾರ ಬದಲಾವಣೆ

ಸಮಗ್ರ ನ್ಯೂಸ್: ಕರಾವಳಿ ಭಾಗದ ಜನರ ಬಹುಕಾಲದ ಆಶೋತ್ತರಗಳನ್ನು ಈಡೇರಿಸುವ ಹಾಗೂ ಪ್ರಾದೇಶಿಕ ಅಭಿವೃದ್ಧಿಗೆ ವೇಗ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸೆ.18ರಂದು ದಕ್ಷಿಣ ಕನ್ನಡ ಜಿಲ್ಲೆಯ ಕಡಲನಗರಿ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

. Ad Widget . Ad Widget

ರಾಜ್ಯ ಸರ್ಕಾರದ ಸಿಎಂ, ಡಿಸಿಎಂ ಸೇರಿ ಸಚಿವರು ಶಾಸಕರಿ ಈ ಸಂಪುಟ ಸಭೆಯಲ್ಲಿ ಗಣ್ಯರು ಇರಲಿದ್ದು ಮಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಸಂಚಾರ ಬದಲಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

. Ad Widget . . Ad Widget . Ad Widget

ಸೆ.17ರ ಸಂಜೆ ಮತ್ತು ಸೆ. 19ರ ಬೆಳಿಗ್ಗೆ ಜಪೆ ವಿಮಾನ ನಿಲ್ದಾಣದಿಂದ ಕಾವೂರು – ಬೋಂದೆಲ್ – ಮೇರಿಹಿಲ್ – ಕೆ.ಪಿ.ಟಿ. — ಕದ್ರಿ ಕಂಬಳ – ಬಂಟ್ಸ್ ಹಾಸ್ಟೆಲ್- ಡಾ| ಬಿ.ಆರ್.ಅಂಬೇಡ್ಕರ್ ಜಂಕ್ಷನ್ – ಹಂಪನ್ ಕಟ್ಟೆ – ಕ್ಲಾಕ್ ಟವರ್ – ಹ್ಯಾಮಿಲ್ಟನ್ ಜಂಕ್ಷನ್
ಕ್ಲಾಕ್ ಟವರ್- ಹಂಪನಕಟ್ಟ – ಡಾ| ಬಿ.ಆರ್.ಅಂಬೇಡ್ಕರ್ ಜಂಕ್ಷನ್ – ಕೆ.ಪಿ.ಟಿ.ಜಂಕ್ಷನ್ – ನಂತೂರು ವೃತ್ತ – ಪಂಪುವೆಲ್ – ನಾಗುರಿ – ಬಜಾಲ್ ಕ್ರಾಸ್ (ಪ್ರಜಾಸೌಧ)- ಪಡೀಲ್ ಜಂಕ್ಷನ್ ಈ ಮೇಲ್ಕಂಡ ಮಾರ್ಗಗಳಲ್ಲಿ ರಸ್ತೆಬದಿಯಲ್ಲಿ ಯಾವುದೇ ವಾಹನಗಳನ್ನು ನಿಲುಗಡೆ ಮಾಡದಂತೆ ಖಡಕ್ ಸೂಚನೆ ಹೊರಡಿಸಲಾಗಿದೆ.
ಬದ್ರಿಯಾ ಜಂಕ್ಷನ್‌ನಿಂದ ಹೋಟೆಲ್ ತಾಜ್ ವಿವಾಂತ್ ಮುಂಭಾಗದ ಮೂಲಕ ಹ್ಯಾಮಿಲ್ಟನ್ ಜಂಕ್ಷನ್ ಕಡೆಗೆ ಸಂಚರಿಸಬೇಕಾದ ಎಲ್ಲಾ ತರಹದ ವಾಹನಗಳು ಪರ್ಯಾಯವಾಗಿ ಬದ್ರಿಯಾ ಜಂಕ್ಷನ್ – ನಿಲೇಶ್ವರ ರಸ್ತೆ – ರೋಸಾರಿಯೋ ರಸ್ತೆ ಮುಖಾಂತರವಾಗಿ ಸಂಚರಿಸಲು ಪರ್ಯಾಯ ಮಾರ್ಗ ಸೂಚಿಸಲಾಗಿದೆ.
ಅದೇ ರೀತಿ ಹ್ಯಾಮಿಲ್ಟನ್ ಜಂಕ್ಷನ್‌ನಿಂದ ಹೋಟೆಲ್ ತಾಜ್ ವಿವಾಂತ್ ಮುಂಭಾಗದ ಮೂಲಕ ಬದ್ರಿಯಾ ಜಂಕ್ಷನ್ ಕಡೆಗೆ ಸಂಚರಿಸಬೇಕಾದ ಎಲ್ಲಾ ತರಹದ ವಾಹನಗಳು ಪರ್ಯಾಯವಾಗಿ ಹ್ಯಾಮಿಲ್ಟನ್ ಜಂಕ್ಷನ್ – ನೆಲ್ಲಿಕಾಯಿ ರಸ್ತೆ ಮಾರ್ಗವಾಗಿ ಸಂಚರಿಸಬೇಕು.
ಪಂಪುವೆಲ್ ಜಂಕ್ಷನ್‌ನಿಂದ ನಾಗುರಿ ಮೂಲಕ ಪಡೀಲ್ ಜಂಕ್ಷನ್ ಕಡೆಗೆ ಅಥವಾ ಪಡಿಲ್ ಜಂಕ್ಷನ್ ಕಡೆಯಿಂದ ನಾಗುರಿ ಮೂಲಕ ಪಂಪುವೆಲ್ ಕಡೆಗೆ ಸಂಚರಿಸಬೇಕಾದ ಎಲ್ಲಾ ತರಹದ ವಾಹನಗಳು ಪರ್ಯಾಯವಾಗಿ ನಂತೂರು ವೃತ್ತ – ಕೈಕಂಬ – ಮರೋಳಿ ಮೂಲಕ ಅಥವಾ ತೊಕ್ಕೊಟ್ಟು – ದೇರಳಕಟ್ಟೆ – ಮುಡಿಪು – ಬೊಳ್ಯಾರ್ – ಮೆಲ್ಕಾರ್ ಮೂಲಕ ಸಂಚರಿಸಲು ಸೂಚಿಸಲಾಗಿದೆ.
ಬಜಾಲ್ ಕ್ರಾಸ್(ಪ್ರಜಾಸೌಧ) ನಿಂದ ಬಜಾಲ್ ಕಡೆಗೆ ಅಥವಾ ಕಂಕನಾಡಿ ಜಂಕ್ಷನ್ ರೈಲ್ವೆ ನಿಲ್ದಾಣ ಕಡೆಗೆ ಬರುವ ಮತ್ತು ಹೋಗುವ ಎಲ್ಲಾ ತರಹದ ವಾಹನಗಳು ಪಡಿಲ್ ಬಜಾಲ್ ಕ್ರಾಸ್‌ಗೆ ಪರ್ಯಾಯವಾಗಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮುಂದುವರಿದು ಜಪ್ಪಿನಮೊಗರು ದ್ವಾರ – ಬಜಾಲ್ ಮೂಲಕ ಸಂಚರಿಸಲು ತಿಳಿಸಲಾಗಿದೆ.
ತೊಕ್ಕೊಟ್ಟು ಕಡೆಯಿಂದ ಪಂಪುವೆಲ್ ಕಡೆಗೆ ಸಂಚರಿಸುವ ವಾಹನಗಳು ಮಹಾಕಾಳಿಪಡ್ಪು – ಮಂಗಳಾದೇವಿ ಮೂಲಕ ನಗರಕ್ಕೆ ಸಂಚರಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕಡಲನಗರಿ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನಿಸಲಾಗಿರುವ ವಿಚಾರವನ್ನು ಡಿಕೆ ಶಿವಕುಮಾರ್ ಸಾಮಾಜಿಕ ಜಾಲತಾಣದ ಮೂಲಕ ವಿಡಿಯೋ ಸಂದೇಶ ಹರಿಯಬಿಟ್ಟು ಹೇಳಿದ್ದರು.ಕರಾವಳಿ ಭಾಗದ ಜನರ ಬಹುಕಾಲದ ಆಶೋತ್ತರಗಳನ್ನು ಈಡೇರಿಸಲು ಇದೇ ಸೆಪ್ಟೆಂಬರ್ 18ರಂದು ಕಡಲನಗರಿ ಮಂಗಳೂರಿನಲ್ಲಿ ನಮ್ಮ ಸರ್ಕಾರದ ವಿಶೇಷ ಸಚಿವ ಸಂಪುಟ ಸಭೆ ಆಯೋಜಿಸಿದ್ದೇವೆ. ಕರಾವಳಿಯ ಜನರ ಕಷ್ಟ-ಸುಖಗಳನ್ನು ಹತ್ತಿರದಿಂದ ಕಂಡು, ಸ್ಥಳೀಯ ಅಗತ್ಯಗಳಿಗೆ ತಕ್ಕಂತೆ ಸ್ಥಳದಲ್ಲೇ ನಿರ್ಧಾರ ಕೈಗೊಳ್ಳುವುದು ನಮ್ಮ ಉದ್ದೇಶ. ಬಂದರು, ಮೂಲಸೌಕರ್ಯ, ಮೀನುಗಾರಿಕೆ ಮತ್ತು ಕೈಗಾರಿಕಾ ರಂಗಗಳಿಗೆ ನವಚೈತನ್ಯ ತುಂಬುವ ಮೂಲಕ ಕರಾವಳಿಯ ಸಮೃದ್ಧಿಗೆ ಹೊಸ ಮುನ್ನುಡಿ ಬರೆಯಲು ‘ಟೀಮ್ ಕರ್ನಾಟಕ’ ಸಜ್ಜಾಗಿದೆ ಎಂದು ಡಿಕೆಶಿ ಹೇಳಿದ್ದು, ವಿಡಿಯೋ ಸಂದೇಶದ ಕೊನೆಯಲ್ಲಿ ‘ಮಾತೆರೆಗ್​ಲ ಸೊಲ್ಮೆಲು’ (ಎಲ್ಲರಿಗೂ ವಂದನೆಗಳು) ಎಂದು ತುಳು ಭಾಷೆಯಲ್ಲೇ ಮಾತನಾಡಿದ್ದರು.

Leave a Comment

Your email address will not be published. Required fields are marked *