ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ನಿನ್ನೆ ನಡೆದ ಐತಿಹಾಸಿಕ ಸಚಿವ ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಮಂಗಳೂರು ಮೀನುಗಾರಿಕಾ ಬಂದರಿಗೆ ಭೇಟಿ ನೀಡಿ, ಬಂದರಿನಲ್ಲಿ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ತದನಂತರ ಮೀನುಗಾರರೊಂದಿಗೆ ಸಂವಾದ ನಡೆಸಿ, ಅವರ ಸಮಸ್ಯೆಗಳು, ಅಗತ್ಯತೆಗಳು ಹಾಗೂ ಜೀವನೋಪಾಯದ ಸ್ಥಿತಿಗತಿಗಳ ಕುರಿತು ಮಾಹಿತಿ ಪಡೆದು, ಅಗತ್ಯ ಕ್ರಮಗಳ ಬಗ್ಗೆ ಚರ್ಚಿಸಿದರು. ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.










