ಸೌಜನ್ಯ ಪ್ರಕರಣದ ಮರುತನಿಖೆ‌ ಸ್ವಾಗತಿಸಿದ ಧರ್ಮಸ್ಥಳ ಕ್ಷೇತ್ರ

ಸಮಗ್ರ ನ್ಯೂಸ್: ಸರ್ವೋಚ್ಚ ನ್ಯಾಯಾಲಯವು ಸೌಜನ್ಯ ಪ್ರಕರಣ ಮರು ತನಿಖೆಗೆ ಒಪ್ಪಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಈ ನಿರ್ಧಾರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಮುಕ್ತಮನಸ್ಸಿನಿಂದ ಸ್ವಾಗತಿಸುತ್ತೇವೆ ಎಂದು ಕ್ಷೇತ್ರದ ದೇವಾಲಯ ಕಚೇರಿ ವ್ಯವಸ್ಥಾಪಕ ಪಾರ್ಶ್ವನಾಥ ಜೈನ್ ತಿಳಿಸಿದ್ದಾರೆ.

. Ad Widget . Ad Widget

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕಳೆದ ಹಲವು ವರ್ಷಗಳಿಂದ ಶ್ರೀ ಕ್ಷೇತ್ರದ ಮೇಲೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ವ್ಯವಸ್ಥಿತವಾಗಿ ಹಾಗೂ ನಿರಂತರವಾಗಿ ಅಪಪ್ರಚಾರ ನಡೆಸಿ, ಕಳಂಕ ತರುವ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಸೌಜನ್ಯಳಿಗೆ ನ್ಯಾಯ ದೊರೆಯಬೇಕು ಎಂಬುದು ಶ್ರೀ ಕ್ಷೇತ್ರದ ದೃಢವಾದ ಆಶಯವಾಗಿದೆ. ಈಗ ಆದೇಶಿಸಲಾಗಿರುವ ಮರು ತನಿಖೆ ಸಂಪೂರ್ಣ ನಿಷ್ಪಕ್ಷಪಾತವಾಗಿ ಹಾಗೂ ಪಾರದರ್ಶಕವಾಗಿ ನಡೆಯಲಿ ಮತ್ತು ಈ ಮೂಲಕ ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆಯಲಿ ಎಂದು ನಾವು ಆಶಿಸುತ್ತೇವೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

. Ad Widget . . Ad Widget . Ad Widget

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದ್ದು, ವಿಶೇಷ ತನಿಖಾ ತಂಡ ರಚಿಸಿ ಮೂರು ತಿಂಗಳೊಳಗೆ ತನಿಖಾ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದೆ. ಪ್ರಕರಣ ನಡೆದು 14 ವರ್ಷಗಳ ಬಳಿಕ ಮರು ತನಿಖೆಗೆ ನ್ಯಾಯಾಲಯ ಆದೇಶ ನೀಡಿರುವುದು ಒಂದು ಮಹತ್ವದ ಬೆಳವಣಿಗೆಯಾಗಿದೆ.

Leave a Comment

Your email address will not be published. Required fields are marked *