ಸೌಜನ್ಯ ಕೊಲೆ ಪ್ರಕರಣ| ಅ.10ರಂದು ನ್ಯಾಯದ ನಡಿಗೆ

ಸಮಗ್ರ ನ್ಯೂಸ್: ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ನಡೆಸಿದ ಸುದೀರ್ಘ ಹೋರಾಟವನ್ನು ಬೆಂಬಲಿಸಿದವರಿಗೆ ಕೃತಜ್ಞತೆ ಸಲ್ಲಿಸಲು ಅ.10ರಂದು ‘ನ್ಯಾಯದ ನಡಿಗೆ’ ಪಾದಯಾತ್ರೆಯನ್ನು ಇಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದಿ.ಸೌಜನ್ಯಾ ಅವರ ತಾಯಿ ಕುಸುಮಾವತಿ ಚಂದಪ್ಪಗೌಡ, ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಗಿರೀಶ್ ಮಟ್ಟಣ್ಣನವರ ತಿಳಿಸಿದರು.

. Ad Widget . Ad Widget . Ad Widget

ಉಜಿರೆಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಉಜಿರೆಯ ಕುಂಜರ್ಪದಿಂದ ಹೊರಡುವ ಪಾದಯಾತ್ರೆ ಬೆಳ್ತಂಗಡಿ ಪಟ್ಟಣದಲ್ಲಿ ಸಮಾರೋಪಗೊಳ್ಳಲಿದೆ. ಬಳಿಕ ಸಾರ್ವಜನಿಕ ಸಭೆ ನಡೆಯಲಿದ್ದು, ಸಂವಿಧಾನ, ಕಾನೂನು ಮತ್ತು ನ್ಯಾಯಾಂಗ ವ್ಯವಸ್ಥೆಯ ಮೇಲಿನ ಸಾರ್ವಜನಿಕ ನಂಬಿಕೆಯ ಮರುಸ್ಥಾಪನೆಗಾಗಿ ಅಗತ್ಯ ಕ್ರಮಕೈಗೊಳ್ಳುವಂತೆ ಎಸ್‌ಐಟಿಯನ್ನು ಆಗ್ರಹಿಸಲಿದ್ದೇವೆ’ ಎಂದು ತಿಳಿಸಿದರು.

. Ad Widget .

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ, ‘ಸಂತ್ರಸ್ತೆಯ ತಾಯಿ ಸಲ್ಲಿಸಿದ್ದ ವಿಶೇಷ ಮೇಲ್ಮನವಿಯನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್, ಸೆ. 22ರಂದು ಆದೇಶ ಹೊರಡಿಸಿದೆ. ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಹೊಸ ವಿಶೇಷ ತನಿಖಾ ತಂಡ(ಎಸ್‌ಐಟಿ)ವನ್ನು ರಚಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. 14 ವರ್ಷಗಳ ಸುಧೀರ್ಘ ಹೋರಾಟದ ಬಳಿಕ ಈ ಪ್ರಕರಣದ ಮರುತನಿಖೆ ಆದೇಶವಾಗಿರುವುದು ನ್ಯಾಯಾಂಗ ವ್ಯವಸ್ಥೆಯ ಇತಿಹಾಸದಲ್ಲೇ ಮೈಲುಗಲ್ಲು. ನ್ಯಾಯ ಸಿಗಲು ಸಾಧ್ಯವೇ ಇಲ್ಲ ಎನ್ನುವ ಸ್ಥಿತಿಯಲ್ಲಿ, ಅಸಹಾಯಕ ಜನರಿಗೆ ದೇಶದ ನ್ಯಾಯ ವ್ಯವಸ್ಥೆ ಮೇಲೆ ನಂಬಿಕೆ ಮೂಡಿಸುವಂತಹ ಆಶಾಕಿರಣವಿದು. ಬಗೆಹರಿಯದೇ ಉಳಿದಿದ್ದ ಪ್ರಕರಣಕ್ಕೆ ಈ ಆದೇಶವು ಹೊಸ ಆಯಾಮ ನೀಡಿದೆ. ಎಸ್‌ಐಟಿಗೆ ನೇಮಿಸಿರುವ ಅಧಿಕಾರಿಗಳು ಯಾರೇ ಇರಲಿ, ಅವರು ನಡೆಸುವ ತನಿಖೆಯನ್ನು ನಮ್ಮ ವಕೀಲರ ತಂಡವು ಸೂಕ್ಷ್ಮವಾಗಿ ಗಮನಿಸಲಿದೆ’ ಎಂದರು.

Leave a Comment

Your email address will not be published. Required fields are marked *