ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿದ್ದು, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಇಂದು (ಅಕ್ಟೋಬರ್ 9) ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ಹವಾಮಾನ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 9 ಮತ್ತು 10ರಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲೂ ಕೆಲವು ಕಡೆ ಮಳೆಯಾಗುವ ಸಾಧ್ಯತೆಯಿದೆ.
ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳ ಕೆಲವು ಕಡೆ ಗುಡುಗು ಸಹಿತ ಸಾಧಾರಣ ಮಳೆಯಾಗಬಹುದು.
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲೂ ಕೆಲವು ಕಡೆ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲೂ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ.









