ಸಮಗ್ರ ನ್ಯೂಸ್: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೊಂಡಿದೆ. ಚಾಮುಂಡಿ ಬೆಟ್ಟದಲ್ಲಿ ನಾಡ ಅದಿದೇವತೆ ಚಾಮುಂಡಿ ತಾಯಿಗೆ ವಿಶೇಷ ಪೂಜೆ ನೆರವೇರಿಸಿದ ಬಳಿಕ ಚಾಮುಂಡಿ ತಾಯಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಅಭಿನವ ಗವಿಸಿದ್ದೇಶ್ವರ ಶ್ರೀಗಳು ಚಾಲನೆ ನೀಡಿದರು.
ಬೆಳಗ್ಗೆ 11.50ರಿಂದ 12.13ರ ನಡುವಿನ ಶುಭ ಧನುರ್ ಲಗ್ನದಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಶ್ರೀಗಳು ಚಾಅಲನೆ ನೀಡಿದರು.
ಕಾರ್ಯಕ್ರಮದಲ್ಲಿ ಸಿಎಂ ಡಿಕೆ ಶಿವಕುಮಾರ್, ಡಿಸಿಎಂ ಪರಮೇಶ್ವರ್, ಸಚಿವ ಯತೀಂದ್ರ ಸಿದ್ದರಾಮಯ್ಯ, ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ, ನೂರಾರು ಮಠಾಧೀಶರು ಹಾಗೂ ಧರ್ಮಗುರುಗಳು ಭಾಗವಹಿಸಿದ್ದರು.
ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಪಾಸ್ ಇದ್ದವರಿಗೆ ಮಾತ್ರ ಉದ್ಘಾಟನಾ ಕಾರ್ಯಕ್ರಮಕ್ಕೆ ಅವಕಾಶ ನೀಡಲಾಗಿದೆ.









