ರಾಜ್ಯಾದ್ಯಂತ ಹಿಂಗಾರು ಮಳೆ ಅಬ್ಬರ| ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಬಹುತೇಕ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರ ಮುನ್ಸೂಚನೆ ನೀಡಿದೆ.

. Ad Widget . Ad Widget . Ad Widget

ಅಕ್ಟೋಬರ್ 15ರಂದು ನೈಋತ್ಯ ಮುಂಗಾರು ಕರ್ನಾಟಕದಲ್ಲಿ ಬಹುತೇಕ ನಿಂತುಹೋಗಿದ್ದು, ಇದೇ ವೇಳೆ ದಕ್ಷಿಣ ಒಳನಾಡಿನಲ್ಲಿ ಈಶಾನ್ಯ ಮುಂಗಾರು ಮಳೆ ಆರಂಭವಾಗಿದೆ. ಇದರ ಪರಿಣಾಮವಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

. Ad Widget .

ದಕ್ಷಿಣ ಕನ್ನಡ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ಅಕ್ಟೋಬರ್ 16ರಂದು ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ವಿಜಯಪುರ, ಕೊಪ್ಪಳ ಮತ್ತು ಹಾವೇರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ವೇಳೆ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ಇದೆ. ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅಕ್ಟೋಬರ್ 17ರಂದು ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೀದರ್, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಹಲವು ಕಡೆಗಳಲ್ಲಿ ಗುಡುಗು, ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು.

Leave a Comment

Your email address will not be published. Required fields are marked *