ಬಾಲಿವುಡ್ ನಟ ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ; ಓರ್ವ ವಶಕ್ಕೆ

ಸಮಗ್ರ ನ್ಯೂಸ್: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಮುಂಬೈ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಒಂದು ದಾಳಿ ಹೊಣೆಯನ್ನು ಬಿಷ್ಣೊಯಿ ಗ್ಯಾಂಗ್ ಹೊತ್ತುಕೊಂಡಿದೆ.

. Ad Widget . Ad Widget . Ad Widget

ಸಲ್ಮಾನ್ ಖಾನ್ ಜೊತೆಗೆಗಿನ ಕೆಲಸವೇ ಇದೀಗ ಅವರಿಗೆ ಮುಳುವಾಗಿದೆ ಎನ್ನಲಾಗಿದೆ.ಮುಂಬೈನ ಸಾಂತಾಕ್ರೂಜ್ ಪ್ರದೇಶದಲ್ಲಿ ಈ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

. Ad Widget .

ಜುಹು ಪ್ರದೇಶದಲ್ಲಿ ಭಾನುವಾರ ಟೈಗರ್ ಶ್ರಾಫ್ ಅವರ ಬಿಎಂಡಬ್ಲ್ಯು ವಾಹನದ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಬಳಿಕ ನಗರದಲ್ಲಿ ಭಾರೀ ಆತಂಕ ಸೃಷ್ಟಿಯಾಗಿತ್ತು. ಪ್ರಕರಣದ ಬೆನ್ನುಹತ್ತಿರುವ ತನಿಖಾಧಿಕಾರಿಗಳು ತೀವ್ರ ಶೋಧ ಕಾರ್ಯ ನಡೆಸಿ ಸಾಂತಾಕ್ರೂಜ್‌ನಲ್ಲಿ ಈ ಶಂಕಿತನನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ನಡೆದ ಸಂದರ್ಭ, ಸ್ಥಳದಲ್ಲಿದ್ದ ಪರಿಸ್ಥಿತಿಗಳು ಮತ್ತು ಕೃತ್ಯದ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ಪತ್ತೆಹಚ್ಚಲು ಆತನ ವಿಚಾರಣೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Leave a Comment

Your email address will not be published. Required fields are marked *