ಸಮಗ್ರ ನ್ಯೂಸ್: ದಸರಾ ಹಬ್ಬದ ಸಂಭ್ರಮದಲ್ಲಿ ಕಾರನ್ನು ಡೆಲಿವರಿ ಪಡೆದು, ರಸ್ತೆಗಿಳಿಸುವ ವೇಳೆಯೇ ಭೀಕರ ಅಪಘಾತ ಸಂಭವಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಸಾಗರ ನಗರದ ಮಾರುತಿ ಕಾರು ಶೋರೂಮ್ ಬಳಿ ಈ ಘಟನೆ ನಡೆದಿದೆ.
ಶೋರೂಮ್ನಲ್ಲಿ ಹೊಸ ಕಾರನ್ನ ಪಡೆದು, ಹೊರಬರುವ ವೇಳೆ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿದ ಕಾರು, ಶೋರೂಮ್ ಎದುರಿನ ಬ್ಯಾರಿಕೇಡ್ಗೆ ಡಿಕ್ಕಿಯಾಗಿ, ಬಳಿಕ ರಸ್ತೆಗೆ ನುಗ್ಗಿದೆ. ಈ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ಗೆ ಕಾರು ಡಿಕ್ಕಿ ಹೊಡೆದಿದೆ.
ಪರಿಣಾಮ ಬೈಕ್ ಸವಾರನಿಗೆ ಗಂಭೀರಗಳಾಗಿದ್ದು, ಕೂಡಲೇ ಗಾಯಾಳುಗಳನ್ನ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಈ ಅಪಘಾತದ ದೃಶ್ಯ ಶೋರೂಮ್ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಸಂಬಂಧ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.









