ಬಂಟ್ವಾಳ: ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ ಸಾವು

ಸಮಗ್ರ ನ್ಯೂಸ್: ಮನೆಯ ಹಾಲ್‌ನಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಕಿಟಕಿಯ ಹಗ್ಗ ಕುತ್ತಿಗೆಗೆ ಸಿಲುಕಿ 9 ವರ್ಷದ ಬಾಲಕನೊಬ್ಬ ಉಸಿರುಗಟ್ಟಿ ದಾರುಣವಾಗಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಮಾವಿನಕಟ್ಟೆ ಸಮೀಪದ ಕೆಂತಲೆ ಎಂಬಲ್ಲಿ ರವಿವಾರ ರಾತ್ರಿ ನಡೆದಿದೆ.

. Ad Widget . Ad Widget . Ad Widget

ಕೆಂತಲೆ ನಿವಾಸಿ ಆನಂದ ಪೂಜಾರಿ ಅವರ ಪುತ್ರ ಅಮೃತ್ ಎ. ಪೂಜಾರಿ (9) ಮೃತಪಟ್ಟ ನತದೃಷ್ಟ ಬಾಲಕ. ಅಕ್ಟೋಬರ್ 25ರ ರಾತ್ರಿ ಬಾಲಕ ಅಮೃತ್ ಮನೆಯ ಎದುರಿನ ಹಾಲ್‌ನಲ್ಲಿ ಒಬ್ಬನೇ ಆಟವಾಡುತ್ತಿದ್ದನು. ಈ ವೇಳೆ ಆಕಸ್ಮಿಕವಾಗಿ ಮನೆಯ ಕಿಟಕಿಗೆ ಕಟ್ಟಲಾಗಿದ್ದ ಹಗ್ಗವು ಆತನ ಕುತ್ತಿಗೆಗೆ ಬಿಗಿದುಕೊಂಡು ಉಸಿರುಗಟ್ಟಿದೆ. ಬಾಲಕ ಸದ್ದಿಲ್ಲದೆ ಹಗ್ಗದಲ್ಲಿ ಸಿಲುಕಿ ಒದ್ದಾಡುತ್ತಿದ್ದುದನ್ನು ಕಂಡ ಆತನ ಸಹೋದರಿ ಪ್ರಾರ್ಥನಾ, ತಕ್ಷಣವೇ ಪಕ್ಕದಲ್ಲಿದ್ದ ಚಿಕ್ಕಪ್ಪನ ಮನೆಗೆ ಓಡಿಹೋಗಿ ವಿಷಯ ತಿಳಿಸಿದ್ದಾಳೆ.

. Ad Widget .

ಕೂಡಲೇ ಬಾಲಕನನ್ನು ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಬಾಲಕ ಆಸ್ಪತ್ರೆಗೆ ತಲುಪುವಷ್ಟರಲ್ಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಈ ಕರುಣಾಜನಕ ದುರಂತಕ್ಕೆ ಸಂಬಂಧಿಸಿದಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು (UDR) ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆಟವಾಡುವ ವಯಸ್ಸಿನ ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

Leave a Comment

Your email address will not be published. Required fields are marked *