ಚುರುಕುಗೊಂಡ ಸೌಜನ್ಯ ಕೊಲೆ ಪ್ರಕರಣ ತನಿಖೆ| ಹಿಂದಿನ ತನಿಖಾಧಿಕಾರಿ ಸೇರಿ 15 ಮಂದಿಗೆ ಎಸ್ ಐಟಿ ನೊಟೀಸ್

ಸಮಗ್ರ ನ್ಯೂಸ್: ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಯನ್ನು ಕೈಗೆತ್ತಿಕೊಂಡಿರುವ ವಿಶೇಷ ತನಿಖಾ ತಂಡ (SIT) ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಪ್ರಕರಣದ ಆರಂಭಿಕ ಹಂತದಲ್ಲಿ ತನಿಖೆ ನಡೆಸಿದ್ದ ಮಾಜಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಎಸ್‌ಐಟಿ ಇದೀಗ ಸಮನ್ಸ್/ನೋಟಿಸ್ ಜಾರಿ ಮಾಡಿದೆ.

. Ad Widget . Ad Widget . Ad Widget

2012ರಲ್ಲಿ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಈ ಭೀಕರ ಅತ್ಯಾಚಾರ-ಹತ್ಯೆ ಪ್ರಕರಣದ ಆರಂಭಿಕ ಹಂತದ ಸ್ಥಳೀಯ ಪೊಲೀಸರು, ಸಿಐಡಿ ಹಾಗೂ ಸಿಬಿಐ ತನಿಖಾ ತಂಡದಲ್ಲಿದ್ದ 15ಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ಸಿಬ್ಬಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ರವಾನಿಸಲಾಗಿದೆ. ಸಿಆರ್‌ಪಿಸಿ (CrPC) ಸೆಕ್ಷನ್ 160ರ ಅಡಿಯಲ್ಲಿ ವಿಚಾರಣೆಗೆ ಕಡ್ಡಾಯವಾಗಿ ಹಾಜರಾಗುವಂತೆ ಎಸ್‌ಐಟಿ ಅಧಿಕಾರಿಗಳು ಸೂಚಿಸಿದ್ದಾರೆ.

. Ad Widget .

ನೋಟಿಸ್ ಪಡೆದವರಲ್ಲಿ ಆಗಿನ ಬೆಳ್ತಂಗಡಿ ಠಾಣೆ ಇನ್ಸ್‌ಪೆಕ್ಟರ್ ಭಾಸ್ಕರ್ ರೈ ಆಗಿನ ಪಿಎಸ್‌ಐ ಯೋಗೀಶ್ ಸಿಐಡಿ ತನಿಖಾಧಿಕಾರಿ ಡಿವೈಎಸ್‌ಪಿ ರುದ್ರಮುನಿ ಅಷ್ಟೇ ಅಲ್ಲದೆ, ಅಂದಿನ ಬೆಳ್ತಂಗಡಿ ಠಾಣೆಯಲ್ಲಿದ್ದ ಕೆಳಹಂತದ ಸಿಬ್ಬಂದಿಗೂ ವಿಚಾರಣೆಯ ಬಿಸಿ ಮುಟ್ಟಿದೆ. ಆಗಿನ ಎಎಸ್‌ಐ ಕಲೈಮಾರ್, ಮಹಿಳಾ ಹೆಡ್ ಕಾನ್ಸ್‌ಟೇಬಲ್ ಸವಿತಾ ಶೆಟ್ಟಿ ಹಾಗೂ ಸಿಬ್ಬಂದಿಗಳಾದ ಸುಂದರ್ ಶೆಟ್ಟಿ, ಕೃಷ್ಣ, ರಿಷಬ್, ನವೀನ್ ಮತ್ತು ಭಾಸ್ಕರ್ ಅವರಿಗೂ ಎಸ್‌ಐಟಿ ನೋಟಿಸ್ ನೀಡಿದ್ದು, ತನಿಖಾ ಪ್ರಕ್ರಿಯೆಯಲ್ಲಿ ಅವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಿದೆ.

ಪ್ರಕರಣದ ಆರಂಭಿಕ ಮಹಜರು, ಸಾಕ್ಷ್ಯಾಧಾರಗಳ ಸಂಗ್ರಹ ಹಾಗೂ ತನಿಖಾ ಲೋಪಗಳ ಕುರಿತು ಮರು ಪರಿಶೀಲನೆ ನಡೆಸಲು ಎಸ್‌ಐಟಿ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಸಿಐಡಿ ಮತ್ತು ಸಿಬಿಐ ಹಂತದಲ್ಲಿ ಕಾರ್ಯನಿರ್ವಹಿಸಿದ್ದ ಇತರ ಉನ್ನತ ಅಧಿಕಾರಿಗಳಿಗೂ ಮುಂದಿನ ದಿನಗಳಲ್ಲಿ ನೋಟಿಸ್ ಜಾರಿಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

Leave a Comment

Your email address will not be published. Required fields are marked *