ರಾಜ್ಯಾದ್ಯಂತ ಚಳಿ, ಒಣಹವೆ ಆರಂಭ| ಕಣ್ಮರೆಯಾದ ಹಿಂಗಾರು ಮಳೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಸದ್ಯ ಒಣ ಹವಾಮಾನ ಮುಂದುವರಿದಿದ್ದು, ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ 12.8 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಚಳಿಯ ಅನುಭವ ಹೆಚ್ಚಾಗಿದೆ. ಮುಂದಿನ ಎರಡು ದಿನಗಳಲ್ಲೂ ರಾಜ್ಯದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣ ಹವಾಮಾನವೇ ಮುಂದುವರಿಯುವ ಮುನ್ಸೂಚನೆ ಇದೆ. ಮಳೆಗಾಲ ಮುಗಿದು ಚಳಿಗಾಲ ಆರಂಭವಾಗುತ್ತಿದೆ.

. Ad Widget . Ad Widget . Ad Widget

ರಾಜ್ಯದಲ್ಲಿ ದಾಖಲಾದ ಹವಾಮಾನ ಮಾಹಿತಿಯ ಪ್ರಕಾರ, ದಾವಣಗೆರೆ ಬಯಲು ಪ್ರದೇಶಗಳಲ್ಲಿ ಕನಿಷ್ಠ ತಾಪಮಾನ 12.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮತ್ತೊಂದೆಡೆ, ಉತ್ತರ ಕನ್ನಡದ ಹೊನ್ನಾವರದಲ್ಲಿ ಗರಿಷ್ಠ ತಾಪಮಾನ 36.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ರಾಜ್ಯದಲ್ಲೇ ಅತಿ ಹೆಚ್ಚು ತಾಪಮಾನ ದಾಖಲಾದ ಪ್ರದೇಶವಾಗಿದೆ.

. Ad Widget .

ಅಕ್ಟೋಬರ್ 29ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಇರಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ಒಣ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ.

Leave a Comment

Your email address will not be published. Required fields are marked *