ಸೈಬರ್ ವಂಚನೆಯಿಂದ ಹಣ ಕಳೆದುಕೊಂಡರೆ ಬ್ಯಾಂಕ್ ಗಳೇ ಪರಿಹಾರ ನೀಡಬೇಕು – ಸುಪ್ರೀಂ

ಸಮಗ್ರ ನ್ಯೂಸ್: ಸೈಬರ್ ವಂಚನೆಗಳಿಂದ ಅಮಾಯಕರು ಕಷ್ಟಪಟ್ಟು ಸಂಪಾದಿಸಿದ ಹಣ ಕಳೆದುಕೊಳ್ಳುತ್ತಿರುವ ಘಟನೆಗಳು ಹೆಚ್ಚುತ್ತಿವೆ. ಇದೀಗ ಇಂತಹ ಸಂತ್ರಸ್ತರಿಗೆ ನೆರವಾಗುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ. ಬ್ಯಾಂಕಿಂಗ್ ವ್ಯವಸ್ಥೆಯ ಲೋಪದಿಂದ ಗ್ರಾಹಕರು ಸೈಬರ್ ವಂಚನೆಗೆ ಒಳಗಾಗಿ ಹಣ ಕಳೆದುಕೊಂಡರೆ, ಸಂಬಂಧಪಟ್ಟ ಬ್ಯಾಂಕ್‌ಗಳೇ ಪರಿಹಾರ ನೀಡುವಂತೆ ನಿಯಮ ರೂಪಿಸಲು ಆರ್‌ಬಿಐಗೆ ಸೂಚಿಸಿದೆ.

. Ad Widget . Ad Widget . Ad Widget

ಡಿಜಿಟಲ್ ಅರೆಸ್ಟ್ ಮತ್ತು ಸೈಬರ್ ವಂಚನೆಗಳ ಮೂಲಕ ಅಮಾಯಕ ಜನರ ಹಣ ಲೂಟಿ ಮಾಡುತ್ತಿರುವ ಸೈಬರ್ ಕಳ್ಳರ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಬ್ಯಾಂಕ್‌ಗಳು ಮತ್ತು ಹಣಕಾಸು ಸಂಸ್ಥೆಗಳ ಮೇಲ್ವಿಚಾರಣೆ ಹಾಗೂ ಸೂಕ್ತ ಪರಿಶೀಲನೆಯಲ್ಲಿನ ಲೋಪಗಳಿಂದ ಇಂತಹ ವಂಚನೆಗಳು ನಡೆಯುತ್ತಿವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಬ್ಯಾಂಕಿಂಗ್ ನಿಯಮಗಳ ವೈಫಲ್ಯದಿಂದ ಗ್ರಾಹಕರು ಹಣ ಕಳೆದುಕೊಂಡರೆ, ಸಂಬಂಧಪಟ್ಟ ಬ್ಯಾಂಕ್‌ಗಳು ಅಥವಾ ಹಣಕಾಸು ಸಂಸ್ಥೆಗಳೇ ಅವರಿಗೆ ಸಂಪೂರ್ಣ ಪರಿಹಾರ ನೀಡುವಂತೆ ನಿಯಮ ರೂಪಿಸಬೇಕು ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ಗೆ (RBI) ಸುಪ್ರೀಂ ಕೋರ್ಟ್ ಸೂಚಿಸಿದೆ.

. Ad Widget .

ಈ ಸಂಬಂಧ ಅಂತಿಮ ನಿಯಮಗಳನ್ನು ರೂಪಿಸಿ 2026ರ ನವೆಂಬರ್ 30ರೊಳಗೆ ಅಧಿಸೂಚನೆ ಹೊರಡಿಸಬೇಕು ಹಾಗೂ ಡಿಸೆಂಬರ್ 31ರೊಳಗೆ ಅವುಗಳನ್ನು ಸಂಪೂರ್ಣವಾಗಿ ಜಾರಿಗೆ ತರಬೇಕು ಎಂದು ನ್ಯಾಯಪೀಠ ಸೂಚಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯ ಬಾಗ್ಚಿ ಮತ್ತು ವಿ. ಮೋಹನ್ ಅವರನ್ನೊಳಗೊಂಡ ನ್ಯಾಯಪೀಠ ಈ ಪ್ರಕರಣದ ವಿಚಾರಣೆ ನಡೆಸಿತು.

Leave a Comment

Your email address will not be published. Required fields are marked *