ದೀಪಾವಳಿ ಹಬ್ಬಕ್ಕೆ ರಾತ್ರಿ 8ರಿಂದ 10ರವರೆಗೆ ಪಟಾಕಿ ಹೊಡೆಯಲು ಅವಕಾಶ

ಸಮಗ್ರ ನ್ಯೂಸ್: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿಗಳಿಂದ ಉಂಟಾಗುವ ವಾಯುಮಾಲಿನ್ಯ ಮತ್ತು ಶಬ್ದಮಾಲಿನ್ಯ ನಿಯಂತ್ರಣದ ಉದ್ದೇಶದಿಂದ ರಾತ್ರಿ 8ರಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಹೊಡೆಯಲು ಅವಕಾಶ ನೀಡಲಾಗಿದೆ.

. Ad Widget . Ad Widget . Ad Widget

ನವೆಂಬರ್‌ 8ರಿಂದ 10ರವರೆಗೆ ದೀಪಾವಳಿ ಆಚರಣೆ ನಡೆಯಲಿದ್ದು, ಈ ಸಂದರ್ಭದಲ್ಲಿ ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ.

. Ad Widget .

ನಿಗದಿತ ಸಮಯ ಮೀರಿ ಪಟಾಕಿ ಸಿಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಪರಿಸರ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.

ದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿಗಳಿಂದ ಉಂಟಾಗುವ ಪರಿಸರ ಮಾಲಿನ್ಯದ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ ಆದೇಶಗಳ ಅನ್ವಯ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ. ಜಿಲ್ಲಾಧಿಕಾರಿಗಳು, ಪೊಲೀಸ್‌‍ ವರಿಷ್ಠಾಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ನ್ಯಾಯಾಲಯದ ಆದೇಶಗಳನ್ನು ಚಾಚೂತಪ್ಪದೆ ಪಾಲಿಸಬೇಕು ಎಂದು ಸೂಚಿಸಲಾಗಿದೆ ಎಂದರು.

ಪಟಾಕಿಗಳ ತಯಾರಿಕೆಯಲ್ಲಿ ಸೋಡಿಯಂ, ಬೇರಿಯಂ, ತಾಮ್ರ ಮತ್ತು ಅಲ್ಯೂಮಿನಿಯಂನಂತಹ ಲೋಹಗಳನ್ನು ಬಳಸಲಾಗುತ್ತದೆ. ಇವುಗಳಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆಯಿದೆ. ಹೀಗಾಗಿ, ಪರಿಸರ ಮಾಲಿನ್ಯವನ್ನು ಕಡಿಮೆ ಮಾಡುವ ಉದ್ದೇಶದಿಂದ ಹಸಿರು ಪಟಾಕಿಗಳ ಬಳಕೆಗೆ ಆದ್ಯತೆ ನೀಡಲಾಗಿದೆ. ಹಸಿರು ಪಟಾಕಿಗಳಲ್ಲಿ ಲೋಹದ ಅಂಶವನ್ನು ಸುಮಾರು ಶೇ.30ರಷ್ಟು ಕಡಿಮೆ ಮಾಡಲಾಗಿದೆ ಎಂದು ಸಚಿವರು ವಿವರಿಸಿದರು.

ಸಾರ್ವಜನಿಕರು ಹಸಿರು ಪಟಾಕಿಗಳನ್ನೇ ಬಳಸಬೇಕು. ನಿಷೇಧಿತ ಪಟಾಕಿಗಳನ್ನು ಮಾರಾಟ ಮಾಡುವುದು ಅಥವಾ ದಾಸ್ತಾನು ಮಾಡುವುದು ಕಂಡುಬಂದರೆ ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಇಂತಹ ಪಟಾಕಿಗಳನ್ನು ಸಂಗ್ರಹಿಸಿಟ್ಟಿರುವ ಗೋದಾಮುಗಳ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

Leave a Comment

Your email address will not be published. Required fields are marked *