ಮಂಗಳೂರು: ಅಪಘಾತಕ್ಕೆ ಶಿಪ್ಪಿಂಗ್ ಕಂಪೆನಿ ಚಾಲಕ ಸಾವು

ಸಮಗ್ರ ನ್ಯೂಸ್: ಮಂಗಳೂರು ನಗರದ ಬೈಕಂಪಾಡಿಯಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರರೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಹಳೆಯಂಗಡಿಯ ಕದಿಕೆ ಮೂಲದ ಇಮ್ತಿಯಾಜ್ (39) ಮೃತ ದುರ್ದೈವಿಯಾಗಿದ್ದು, ಇವರು ಶಿಪ್ಪಿಂಗ್ ಸಂಸ್ಥೆಯೊಂದರಲ್ಲಿ ಚಾಲಕರಾಗಿ ವೃತ್ತಿ ನಿರ್ವಹಿಸುತ್ತಿದ್ದರು.

. Ad Widget . Ad Widget . Ad Widget

ಪಣಂಬೂರಿನಲ್ಲಿರುವ ತಮ್ಮ ಕರ್ತವ್ಯದ ಕಚೇರಿಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಲಾರಿ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಡಿಕ್ಕಿಯಿಂದಾಗಿ ಗಂಭೀರ ಗಾಯಗೊಂಡಿದ್ದ ಇಮ್ತಿಯಾಜ್ ಅವರನ್ನು ಸ್ಥಳೀಯರ ನೆರವಿನಿಂದ ನಗರದ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

. Ad Widget .

Leave a Comment

Your email address will not be published. Required fields are marked *