”ನಾನೇನು ಫೈವ್ ಸ್ಟಾರ್ ಹೊಟೇಲ್ ನಲ್ಲಿ ಜೀವಿಸ್ತಿದೇನಾ”| ಕೇಂದ್ರ ಸಚಿವ ಹೆಚ್ ಡಿಕೆ ಆರೋಪಕ್ಕೆ ಹಾಸನ ಡಿಸಿ ಲತಾಕುಮಾರಿ ತಿರುಗೇಟು

ಸಮಗ್ರ ನ್ಯೂಸ್: ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ವಿರುದ್ಧ ಕೇಳಿಬಂದಿರುವ ಲಂಚದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಮತ್ತೊಂದು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

. Ad Widget . Ad Widget . Ad Widget

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಅವರು, ವಾಟ್ಸಾಪ್ ಚಾಟ್‌ಗಳ ಸತ್ಯಾಸತ್ಯತೆ ಪರಿಶೀಲಿಸದೆ ಆರೋಪ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

. Ad Widget .

ಹಾಸನಾಂಬೆ ದೇವಾಲಯದ ಆವರಣದಲ್ಲಿ ವಿಡಿಯೋ ರೆಕಾರ್ಡ್ ಮಾಡಿ ತಮ್ಮ ಸಾಮಾಜಿಕ ಜಾಲತಾಣದ ಸ್ಟೇಟಸ್‌ನಲ್ಲಿ ಹಂಚಿಕೊಂಡಿರುವ ಲತಾಕುಮಾರಿ, ನಿರಪರಾಧಿಗಳನ್ನು ದೂಷಿಸುವ ಹಕ್ಕು ಯಾರಿಗೂ ಇಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಯಾರೋ ಇಬ್ಬರು ಮಾತನಾಡಿಕೊಂಡಿದ್ದಾರೆ ಎನ್ನಲಾದ ವಿಚಾರಗಳನ್ನು ಪರಿಶೀಲಿಸದೆ ಪ್ರಿಂಟ್‌ಔಟ್ ತೆಗೆದು ಬಿಡುಗಡೆ ಮಾಡಿದರೆ ಅದನ್ನು ಒಪ್ಪಿಕೊಳ್ಳಲು ಸಾಧ್ಯವೇ? ಒಬ್ಬರು ಉನ್ನತ ಸ್ಥಾನದಲ್ಲಿದ್ದಾರೆ ಎಂಬ ಕಾರಣಕ್ಕೆ ಅವರು ನೀಡುವ ಪ್ರತಿಯೊಂದು ಮಾಹಿತಿಯನ್ನೂ ಸತ್ಯವೆಂದು ಒಪ್ಪಿಕೊಳ್ಳಬೇಕೇ? ತಪ್ಪು ಮಾಹಿತಿಯ ವಿರುದ್ಧ ಧ್ವನಿ ಎತ್ತುವುದು ನಮ್ಮ ಕರ್ತವ್ಯ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

Leave a Comment

Your email address will not be published. Required fields are marked *