ರಾಜ್ಯಾದ್ಯಂತ ಮುಂದುವರಿದ ಒಣಹವೆ; ತಾಪಮಾನ ಇಳಿಕೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಸದ್ಯ ಒಣಹವೆ ಮುಂದುವರಿದಿದ್ದು, ಮುಂದಿನ ಎರಡು ದಿನಗಳಲ್ಲೂ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ ವೇಳೆ ಕನಿಷ್ಠ ತಾಪಮಾನದಲ್ಲಿ ಮುಂದಿನ ಎರಡು ದಿನ ಇಳಿಕೆಯಾಗುವ ಸಾಧ್ಯತೆಯಿದೆ.

. Ad Widget . Ad Widget . Ad Widget

ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ಇಲ್ಲ.

. Ad Widget .

ಇನ್ನು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳ ಕೊಲ್ಲಿಯಲ್ಲಿ ಮುಂದುವರಿದಿರುವ ಅಕ್ವಾನ್ ಚಂಡಮಾರುತ ದಿಕ್ಕು ಬದಲಿಸಿ ಒಡಿಶಾ ಕರಾವಳಿಯತ್ತ ಸಾಗುತ್ತಿದೆ. ಈ ಹಿಂದೆ ಆಂಧ್ರಪ್ರದೇಶದತ್ತ ಸಾಗುತ್ತಿದ್ದ ಚಂಡಮಾರುತ ದಿಕ್ಕು ಬದಲಿಸಿರುವುದರಿಂದ ಆಂಧ್ರಕ್ಕೆ ಕೊಂಚ ನಿರಾಳತೆ ಸಿಕ್ಕಿದೆ. ಆದರೆ, ಚಂಡಮಾರುತದ ಪ್ರಭಾವದಿಂದ ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿ ಭಾಗಗಳಲ್ಲಿ ಇಂದು ಹಾಗೂ ನಾಳೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

Leave a Comment

Your email address will not be published. Required fields are marked *