ತಿರುಪತಿ ತಿಮ್ಮಪ್ಪನಿಗೆ 160 ಕೋಟಿ ಮೌಲ್ಯದ ಚಿನ್ನದ ಕಾಣಿಕೆ ಅರ್ಪಣೆ

ಸಮಗ್ರ ನ್ಯೂಸ್: ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿಗೆ ಭಕ್ತರೊಬ್ಬರು ನ.26ರಂದು 150 ರಿಂದ 160 ಕೋಟಿ ರೂ ಮೌಲ್ಯದ 121 ಕೆಜಿ ಚಿನ್ನಾಭರಣಗಳನ್ನು ಕಾಣಿಕೆಯಾಗಿ ಅರ್ಪಿಸಲಿದ್ದಾರೆ. ತಿರುಮಲ ದೇಗುಲದ ಇತಿಹಾಸದಲ್ಲೇ ವೈಯಕ್ತಿಕ ಭಕ್ತರೊಬ್ಬರು ನೀಡುತ್ತಿರುವ ಅತಿದೊಡ್ಡ ಕಾಣಿಕೆ ಇದಾಗಲಿದೆ.

. Ad Widget . Ad Widget . Ad Widget

ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿಗೆ ಭಕ್ತರೊಬ್ಬರು ನ.26ರಂದು 150 ರಿಂದ 160 ಕೋಟಿ ರು. ಮೌಲ್ಯದ 121 ಕೆಜಿ ಚಿನ್ನಾಭರಣಗಳನ್ನು ಕಾಣಿಕೆಯಾಗಿ ಅರ್ಪಿಸಲಿದ್ದಾರೆ. ತಿರುಮಲ ದೇಗುಲದ ಇತಿಹಾಸದಲ್ಲೇ ವೈಯಕ್ತಿಕ ಭಕ್ತರೊಬ್ಬರು ನೀಡುತ್ತಿರುವ ಅತಿದೊಡ್ಡ ಕಾಣಿಕೆ ಇದಾಗಲಿದೆ.

. Ad Widget .

ಒಟ್ಟು 121 ಕೆಜಿ ತೂಕದ ಚಿನ್ನವನ್ನು 9 ಸೆಟ್‌ಗಳಲ್ಲಿ 45 ವಿವಿಧ ಆಭರಣಗಳ ರೂಪದಲ್ಲಿ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಈ ಚಿನ್ನಾಭರಣಗಳ ಒಟ್ಟು ಮೌಲ್ಯ ಸುಮಾರು ₹150 ಕೋಟಿಯಿಂದ ₹160 ಕೋಟಿ ಎಂದು ಅಂದಾಜಿಸಲಾಗಿದೆ.

ದಾನಿಯು ಈಗಾಗಲೇ ಟಿಟಿಡಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಎಲ್ಲಾ ವಿಧಿವಿಧಾನಗಳನ್ನು ಪೂರ್ಣಗೊಳಿಸಿದ್ದು, ನ;26 ರಂದು ದೇವಸ್ಥಾನದಲ್ಲಿ ಅಧಿಕೃತವಾಗಿ ಈ ಆಭರಣಗಳನ್ನು ಹಸ್ತಾಂತರಿಸಲಿದ್ದಾರೆ ಎಂದು ದೇಗುಲದ ಅಧಿಕಾರಿಗಳು ಹೇಳಿದ್ದಾರೆ.

ಈ ಹಿಂದೆ 2025ರ ಆಗಸ್ಟ್‌ನಲ್ಲಿ ಉದ್ಯಮಿಯೊಬ್ಬರು ತಮ್ಮ ಕಂಪನಿಯ ಷೇರು ಮಾರಾಟದ ಯಶಸ್ಸಿನ ಹಿನ್ನೆಲೆಯಲ್ಲಿ ತಿಮ್ಮಪ್ಪನಿಗೆ 121 ಕೆಜಿ ಚಿನ್ನ ನೀಡುವುದಾಗಿ ಹರಕೆ ಹೊತ್ತಿದ್ದರು. ಆ ಆಭರಣಗಳ ತಯಾರಿಕೆ ಪೂರ್ಣಗೊಂಡಿದ್ದು, ಈಗ ಅಧಿಕೃತವಾಗಿ ಸಮರ್ಪಣೆಯಾಗುತ್ತಿದೆ

Leave a Comment

Your email address will not be published. Required fields are marked *