Ad Widget .

ಉಡುಪಿ: ಮನನೊಂದು ಆತ್ಮಹತ್ಯೆಗೆ ಶರಣಾದ ಬಿಜೆಪಿ ನಾಯಕಿ

ಉಡುಪಿ: ಮನನೊಂದ ಬಿಜೆಪಿ ಸ್ಥಳೀಯ ನಾಯಕಿಯೊಬ್ಬರು ತಮ್ಮ ವಾಸದ ಮನೆಯಲ್ಲೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಕುಕ್ಕಿಕಟ್ಟೆಯಲ್ಲಿ ಇಂದು ನಡೆದಿದೆ. ಮೃತ ಮಹಿಳೆಯನ್ನು ಆಶಾ ಶೆಟ್ಟಿ (48) ಎಂದು ಗುರುತಿಸಲಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಇವರು ಬಿಜೆಪಿ ಜಿಲ್ಲಾ ಮಹಿಳಾ ಮೊರ್ಚಾದ ಕಾರ್ಯಕಾರಿಣಿ ಸದಸ್ಯೆ, ಹಾಗೂ ತುಳು ಕೂಟ, ಭಜನಾ ಮಂಡಳಿ, ಚಂಡೆ ಬಳಗ ಇವುಗಳಲ್ಲಿ ಸಕ್ರಿಯರಾಗಿದ್ದರೆಂದು ತಿಳಿದುಬಂದಿದೆ.

Ad Widget . Ad Widget . Ad Widget .

ಮೃತರ ಬಳಿ ಮರಣಪತ್ರ ಲಭ್ಯವಾಗಿದ್ದು, ಪತ್ರದಲ್ಲಿ ನೇತ್ರದಾನ ಮಾಡುವಂತೆ ಹಾಗೂ ಇನ್ನಿತರ ವಿಷಯಗಳನ್ನು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.ಹೀಗಾಗಿ ಶವವನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತನ್ನ ಮಗನ ಸಾವಿನ ನಂತರ ಮಾನಸಿಕವಾಗಿ ಆಶಾ ಶೆಟ್ಟಿ ಸಾಕಷ್ಟು ಕುಗ್ಗಿದ್ದರು ಎನ್ನಲಾಗಿದೆ. ಮಗಳಿಗೆ ಮದುವೆಯಾಗಿದ್ದು, ಆತ್ಮಹತ್ಯೆಗೂ ಮೊದಲು ಕರೆ ಮಾಡಿ ಚೆನ್ನಾಗಿ ಮಾತನಾಡಿದ್ದರು ಎಂಬ ಮಾಹಿತಿಯಿದೆ. ಈಗ ಮೃತ ದೇಹವನ್ನು ಮಣಿಪಾಲ್ ಕೆಎಂಸಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, ಬಿಜೆಪಿ ಕಾರ್ಯಕ್ರಮಗಳಲ್ಲಿ ಬಹಳ ಲವಲವಿಕೆಯಿಂದ ಓಡಾಡಿಕೊಂಡಿದ್ದರು. ಪಕ್ಷದ ಚಟುವಟಿಕೆಗಿಂತ ಜಾಸ್ತಿ ರಾಷ್ಟ್ರೀಯ ಹಬ್ಬ, ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಂಡಿದ್ದರು. ಭಜನೆ ತಂಡದಲ್ಲಿ ಸಕ್ರೀಯರಾಗಿದ್ದರು ಎಂದು ಹೇಳಿದ್ದಾರೆ. 

ಸರ್ಕಾರದ ಅನುದಾನ, ಸಹಾಯಗಳನ್ನು ಜನಪ್ರತಿನಿಧಿಗಳ ಬಳಿ ತೆರಳಿ ಕೊಡಿಸಲು ಬಹಳ ಕಾಳಜಿ ಹೊಂದಿದ್ದರು ಎಂದು ಸ್ಥಳೀಯ ಜನಪ್ರತಿನಿಧಿಗಳು ಮಾಹಿತಿ ನೀಡಿದ್ದಾರೆ. ಉಡುಪಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಮಾಜಸೇವಕ ನಿತ್ಯಾನಂದ ಒಳಕಾಡು ಮೃತ ಶರೀರವನ್ನು ಜಿಲ್ಲಾಸ್ಪತ್ರೆ, ಕೆಎಂಸಿಗೆ ರವಾನೆ ಮಾಡಿದ್ದರು. ಇಂದು ಅಂತ್ಯ ಸಂಸ್ಕಾರ ವಿಧಿ ನಡೆಯಲಿದೆ.

Leave a Comment

Your email address will not be published. Required fields are marked *