Ad Widget .

ಕರಾವಳಿ ‌ಜಿಲ್ಲೆಗಳಲ್ಲಿ ನಾಳೆ‌ ಮಹಾ ಲಸಿಕೆ‌ ಅಭಿಯಾನ

ಮಂಗಳೂರು: ಸರಕಾರದ ಸೂಚನೆಯಂತೆ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಸೆ.17ರಂದು ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಬೃಹತ್‌ ಲಸಿಕಾಕರಣ ಅಭಿಯಾನ ನಡೆಯಲಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ದ.ಕ.ದಲ್ಲಿ 533 ಮತ್ತು ಉಡುಪಿ ಜಿಲ್ಲೆಯಲ್ಲಿ ಸುಮಾರು 300 ಕೇಂದ್ರಗಳಲ್ಲಿ ಲಸಿಕೆ ನೀಡಲು ಕ್ರಮಕೈಗೊಳ್ಳಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಉಭಯ ಜಿಲ್ಲಾಧಿಕಾರಿಗಳಾದ ಡಾ| ರಾಜೇಂದ್ರ ಕೆ.ವಿ.ಮತ್ತು ಕೂರ್ಮಾ ರಾವ್‌ ಎಂ. ಅವರು ಹೇಳಿದರು.

Ad Widget . Ad Widget . Ad Widget .

ಮೆಗಾ ಲಸಿಕೆ ಮೇಳದಲ್ಲಿ 1.5 ಲಕ್ಷ ಡೋಸ್‌ ಕೋವಿಡ್‌ ಲಸಿಕೆ ನೀಡುವ ಗುರಿಯನ್ನು ಹೊಂದಿದ್ದು, ಗ್ರಾ. ಪಂ. ವ್ಯಾಪ್ತಿಯಲ್ಲಿ ಹೆಚ್ಚಿನ ಜನಜಾಗೃತಿ ಮೂಡಿಸಬೇಕು. ಲಸಿಕಾ ಕೇಂದ್ರಗಳಲ್ಲಿ ಹೆಚ್ಚಿನ ವೈದ್ಯಕೀಯ ಸಿಬಂದಿ ಆವಶ್ಯಕತೆ ಇದ್ದಲ್ಲಿ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರುಗಳೊಂದಿಗೆ ಚರ್ಚಿಸಿ ಅವರ ಸೇವೆಯನ್ನು ಪಡೆದುಕೊಳ್ಳಬಹುದು ಎಂದು ದ.ಕ ಡಿ ಸಿ ರಾಜೇಂದ್ರ ಸೂಚಿಸಿದರು.

ಸೆ. 17ರ ಮೆಗಾ ಲಸಿಕೆ ಮೇಳದಲ್ಲಿ ನೂರು ಪ್ರತಿಶತ ಪ್ರಗತಿ ಸಾಧಿಸುವ ಗುರಿ ಹೊಂದಲಾಗಿದೆ. ಅಂದು 80 ಸಾವಿರ ಡೋಸ್‌ ಲಸಿಕೆ ಲಭ್ಯವಿದ್ದು, ಗ್ರಾ.ಪಂ. ಮತ್ತು ನಗರ ವ್ಯಾಪ್ತಿಯಲ್ಲಿ 300 ಲಸಿಕಾ ಕೇಂದ್ರಗಳಿಗೆ ವ್ಯವಸ್ಥೆ ಮಾಡಲಾಗುವುದು ಎಂದು ಉಡುಪಿ ‌ಡಿಸಿ ಕೂರ್ಮರಾವ್ ತಿಳಿಸಿದ್ದಾರೆ.

Leave a Comment

Your email address will not be published. Required fields are marked *