ಪುತ್ತೂರು: ಅರಣ್ಯಾಧಿಕಾರಿ ಕಳೆದ 4 ತಿಂಗಳಿನಿಂದ ಸಂಬಳ ಇಲ್ಲದೆ ಕೆಲಸ ಮಾಡುತ್ತಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಹಿರಿಯ ಅಧಿಕಾರಿಗಳ ವೈಯುಕ್ತಿಕ ದ್ವೇಷದಿಂದಾಗಿ ಸಂಬಳ ಸಿಗುತ್ತಿಲ್ಲ ಎಂದು ಅರಣ್ಯಾಧಿಕಾರಿ ಆರೋಪಿಸಿದ್ದಾರೆ.
ಪುತ್ತೂರು ಉಪ ವಲಯ ಸಂರಕ್ಷಣಾಧಿಕಾರಿ ಸಂಜೀವ ಪೂಜಾರಿ ಸಂಬಳವಿಲ್ಲದೆ ದುಡಿಯುತ್ತಿರುವ ಅಧಿಕಾರಿಯಾಗಿದ್ದು, ಈ ಹಿಂದೆ ಇವರನ್ನು ಸಕಾರಣವಿಲ್ಲದೆ ಹಿರಿಯ ಅಧಿಕಾರಿಗಳು ಸಸ್ಪೆಂಡ್ ಮಾಡಿದ್ದರು ಎಂದು ಆರೋಪಿಸಲಾಗಿದ್ದು, ಹಿರಿಯ ಅಧಿಕಾರಿಗಳ ಕ್ರಮ ಪ್ರಶ್ನಿಸಿ ಸಂಜೀವ ಪೂಜಾರಿಯವರು ಕರ್ನಾಟಕ ರಾಜ್ಯ ಆಡಳಿತ ನ್ಯಾಯಾಧೀಕರಣದ ಮೊರೆ ಹೋಗಿದ್ದರು.
ಅಲ್ಲಿ ಉಪ ವಲಯಾಧಿಕಾಧಿಕಾರಿ ಸಂಜೀವ ಪೂಜಾರಿ ಪರವಾಗಿ ಕೋರ್ಟ್ ತೀರ್ಪು ನೀಡಿತ್ತು, ಇದೀಗ ನ್ಯಾಯಾಲಯ ತೀರ್ಪು ನೀಡಿದರೂ ಅಧಿಕಾರಿಗಳು ಸಂಬಳ ನೀಡದೆ ಸತಾಯಿಸುತ್ತಿದ್ದಾರೆ ಎಂದು ಸಂಜೀವ ಪೂಜಾರಿಯವರು ಆರೋಪಿಸಿದ್ದು, ಈಗಾಗಲೇ ತನಗಾದ ಅನ್ಯಾಯವನ್ನು ಮೇಲಾಧಿಕಾರಿಗಳ ಗಮನಕ್ಕೆ ತಂದರೂ ದೊರೆಯದ ಪರಿಹಾರ ಇನ್ನು ಸಿಕ್ಕಿಲ್ಲ ಎಂದಿದ್ದು, ಕಳೆದ ನಾಲ್ಕು ತಿಂಗಳಿನಿಂದ ಸಂಬಳವಿಲ್ಲದೆ ಸಂಕಷ್ಟದ ಸ್ಥಿತಿಯಲ್ಲಿ ಉಪ ವಲಯ ಸಂರಕ್ಷಣಾಧಿಕಾರಿ ಸಂಜೀವ ಪೂಜಾರಿಯವರು ಇದ್ದಾರೆ.