ಬೆಂಗಳೂರು: ಇಂದಿನ ಪರಿಸ್ಥಿತಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವುದು ಕಷ್ಟ ಎಂದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸದ್ಯದ ಸ್ಥಿತಿಯಲ್ಲಿ ಇಂಧನ ದರ ಇಳಿಸಲು ಸಾಧ್ಯವಿಲ್ಲದ ಪರಿಸ್ಥಿತಿ ಇದೆ ಎಂದು ಹೇಳಿದ್ದಾರೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಇವತ್ತಿನ ಪರಿಸ್ಥಿತಿಯಲ್ಲಿ ಇಂಧನ ದರ ಇಳಿಕೆ ಮಾಡುವ ಸ್ಥಿತಿಯಲ್ಲಿ ನಮ್ಮ ಸರ್ಕಾರ ಇಲ್ಲ. ಕೇಂದ್ರ ಸರ್ಕಾರ ಮುಂದಿನ ದಿನಗಳಲ್ಲಿ ಯಾವ ತೀರ್ಮಾನ ತೆಗೆದುಕೊಳ್ಳುತ್ತೋ ಕಾದು ನೋಡಬೇಕು. ಅದರ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ನಾವು ಕ್ರಮ ಕೈಗೊಳ್ಳುತ್ತೇವೆ. ಪೆಟ್ರೋಲ್ ಮತ್ತು ಡೀಸೆಲ್ ಅನ್ನು GST ವ್ಯಾಪ್ತಿಗೆ ತರಬೇಕೆಂಬುದರ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆಯಾಗಿದೆ. ಆದರೆ GST ವ್ಯಾಪ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ ತರಲು ಯಾವ ರಾಜ್ಯಗಳು ಒಪ್ಪಿಗೆ ನೀಡಿಲ್ಲ’ವೆಂದು ಬಿಎಸ್ವೈ ಹೇಳಿದ್ದಾರೆ.