ಬೆಂಗಳೂರು: ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಮಹತ್ವದ ಸೂಚನೆಯೊಂದನ್ನು ನೀಡಿದೆ. ಅನಧಿಕೃತ ಹೇಳಿಕೆಗಳನ್ನ ನೀಡದಂತೆ ಮತ್ತು ಸರ್ಕಾರಿ ಕಾರ್ಯಕ್ರಮಗಳು ವೈಯಕ್ತಿಕ ಪ್ರದರ್ಶನಗಳಂತೆ ತೋರ್ಪಡಿಸಿಕೊಳ್ಳಬಾರದು ಎಂದು ಹೇಳಿದೆ.
ಸರ್ಕಾರಿ ಅಧಿಕಾರಿಗಳು ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುವುದನ್ನು ಹೊರತುಪಡಿಸಿ, ಪತ್ರಿಕಾಗೋಷ್ಠಿ/ಪತ್ರಿಕಾ ಪ್ರಕಟಣೆ ಮೂಲಕ ಅನಪೇಕ್ಷಿತ ಹೇಳಿಕೆಗಳನ್ನು ನೀಡುವುದನ್ನು, ಕುಂದು ಕೊರತೆಗಳನ್ನು ವ್ಯಕ್ತಪಡಿಸಲು ಮಾಧ್ಯಮಗಳನ್ನು ಬಳಸುವುದನ್ನು ಸರ್ಕಾರ ನಿಷೇಧಿಸಿದೆ.
ಹಾಗೆಯೇ, ಸಾಮಾಜಿಕ ಮಾಧ್ಯಮಗಳ ಮೂಲಕ ಇಲಾಖೆಯ/ಸರ್ಕಾರದ ಸಾಧನೆಗಳನ್ನು, ವೈಯಕ್ತಿಕ ಸಾಧನೆಗಳೆಂಬಂತೆ ಪ್ರದರ್ಶಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪ್ರಸಾರ ಮಾಡಬೇಕಾದ ಸಂದರ್ಭದಲ್ಲಿ, ಸರ್ಕಾರದ/ಆಡಳಿತದ ಹೆಸರಿನಲ್ಲಿ ತೆರೆಯಲಾದ ಖಾತೆಗಳನ್ನು ಮಾತ್ರ ಬಳಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.