ನವದೆಹಲಿ : ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಅಮರಿಂದರ್ ಸಿಂಗ್ ರಾಜೀನಾಮೆ ಬಳಿಕ, ಪ್ರಸ್ತಾವಿತ ಮುಖ್ಯಮಂತ್ರಿಯಾಗಿ ಸುಖ್ ದೇವ್ ಸಿಂಗ್ ಆಯ್ಕೆಯಾಗಿದ್ದಾರೆ ಎನ್ನಲಾಗುತ್ತಿತ್ತು. ಆದರೆ ಇದೀಗ ದಿಢೀರ್ ವಿದ್ಯಮಾನಗಳಲ್ಲಿ ಕಾಂಗ್ರೆಸ್ ನಾಯಕ ಚರಂಜಿತ್ ಸಿಂಗ್ ಚನ್ನಿ ಅವರು ಹೊಸ ಪಂಜಾಬ್ ಮುಖ್ಯಮಂತ್ರಿಯಾಗಲಿದ್ದಾರೆ.
ಈ ಕುರಿತು ಹಿರಿಯ ಕಾಂಗ್ರೆಸ್ ನಾಯಕ ಹರೀಶ್ ರಾವತ್ ಟ್ವೀಟ್ ಮಾಡಿದ್ದು, ಪಂಜಾಬ್ ನ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನಾಯಕ ಚರಂಜಿತ್ ಸಿಂಗ್ ಚನ್ನಿ ಅವರು ಆಯ್ಕೆಯಾಗಿರುವುದಾಗಿ ತಿಳಿಸಿದ್ದಾರೆ.